ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಐವರು ಸಜೀವ ದಹನ.. ಎಲ್ಲಿ?
ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು ಐವರು ಸಜೀವ ದಹನವಾಗಿರುವ ಭೀಕರ ಘಟನೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ವಿಜಯಪುರ ಮೂಲದ ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3) ಮೃತ ದುರ್ದೈವಿಗಳು. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಕಾಣಿಸಿದ ಬೆಂಕಿ ಬಸ್‌ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ ಐವರು ಸಜೀವ ದಹನವಾಗಿದ್ದಾರೆ. […]
Follow us on
ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು ಐವರು ಸಜೀವ ದಹನವಾಗಿರುವ ಭೀಕರ ಘಟನೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ವಿಜಯಪುರ ಮೂಲದ ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3) ಮೃತ ದುರ್ದೈವಿಗಳು.
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಕಾಣಿಸಿದ ಬೆಂಕಿ ಬಸ್‌ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ ಐವರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್‌ನಲ್ಲಿ 32 ಜನರು ಪ್ರಯಾಣಿಸುತ್ತಿದ್ದರು. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.