ಎಚ್ಚರ! ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ರೆ ಸೀದಾ ಸರ್ಕಾರಿ ಕ್ವಾರಂಟೈನ್​!

ಸಾಧು ಶ್ರೀನಾಥ್​

|

Updated on:May 20, 2020 | 4:31 PM

ಧಾರವಾಡ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ತಿರುಗಾಟ ನಡೆಸಿದ್ದ ಐವರನ್ನು ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಕೊವಿಡ್ ಸೋಂಕಿತರೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದರನ್ನು ಜಿಲ್ಲೆಯಾದ್ಯಂತ ಗುರುತಿಸಿ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಇವರೆಲ್ಲರ ಮೇಲೆ ನಿಗಾವಹಿಸಲಾಗಿತ್ತು. ಆ ಮಾಹಿತಿಯನ್ನ ಆಧರಿಸಿ ಇವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ನಿಗದಿತ ವಲಯದಿಂದ ಹೊರಬಂದ ಕೂಡಲೇ ಇವರ ಬಗ್ಗೆ ಕಂಟ್ರೋಲ್ ರೂಮಿಗೆ ಮಾಹಿತಿ ಲಭ್ಯವಾಗುತ್ತದೆ. ಈ ಮಾಹಿತಿ ಆಧರಿಸಿ ಧಾರವಾಡದ ನವಲೂರು ಪ್ರದೇಶದಲ್ಲಿ ಹೋಂ ಕ್ವಾರಂಟೈನ್​ನಲ್ಲಿರುವವರ ಮನೆಗಳಿಗೆ ಹುಬ್ಬಳ್ಳಿ-ಧಾರವಾಡ […]

ಎಚ್ಚರ! ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ರೆ ಸೀದಾ ಸರ್ಕಾರಿ ಕ್ವಾರಂಟೈನ್​!

ಧಾರವಾಡ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ತಿರುಗಾಟ ನಡೆಸಿದ್ದ ಐವರನ್ನು ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಕೊವಿಡ್ ಸೋಂಕಿತರೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದರನ್ನು ಜಿಲ್ಲೆಯಾದ್ಯಂತ ಗುರುತಿಸಿ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಇವರೆಲ್ಲರ ಮೇಲೆ ನಿಗಾವಹಿಸಲಾಗಿತ್ತು. ಆ ಮಾಹಿತಿಯನ್ನ ಆಧರಿಸಿ ಇವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ನಿಗದಿತ ವಲಯದಿಂದ ಹೊರಬಂದ ಕೂಡಲೇ ಇವರ ಬಗ್ಗೆ ಕಂಟ್ರೋಲ್ ರೂಮಿಗೆ ಮಾಹಿತಿ ಲಭ್ಯವಾಗುತ್ತದೆ. ಈ ಮಾಹಿತಿ ಆಧರಿಸಿ ಧಾರವಾಡದ ನವಲೂರು ಪ್ರದೇಶದಲ್ಲಿ ಹೋಂ ಕ್ವಾರಂಟೈನ್​ನಲ್ಲಿರುವವರ ಮನೆಗಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ನಿಯಮ ಉಲ್ಲಂಘಿಸದಿರಲು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು. ಆದರೂ ಅವರು ನಿರಂತರವಾಗಿ ಹೊರಗಡೆ ಸಂಚಾರ ನಡೆಸಿದ್ದರಿಂದ ಅವರನ್ನು ಇದೀಗ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಯ್ಯನಗೌಡ ಪಾಟೀಲ ಅವರ ನೇತೃತ್ವದಲ್ಲಿ ಐವರನ್ನು ವಶಕ್ಕೆ ಪಡೆಯಲಾಯಿತು. ಆಶಾ, ಅಂಗನವಾಡಿ ಕಾರ್ಯಕರ್ತೆಯರ ವಶಕ್ಕೆ ಪಡೆದು, ಬಳಿಕ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಲಾಯಿತು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada