ಮೈಸೂರು: ಲಾಕ್‌ಡೌನ್ ಮಧ್ಯೆ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ವಶಕ್ಕೆ ಪಡೆದಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಆರೋಪ ಕೇಳಿ ಬಂದ ನಂತರ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ 5 ಟನ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹಾಗೂ ಸಿನಿಮಾ ರಸ್ತೆಯಲ್ಲಿರುವ ಯೂರೂಬ್ ಪ್ರಾವಿಷನ್ ಸ್ಟೋರ್ ಮಾಲೀಕ ಸಿದ್ದಿಕ್ನನ್ನು ಬಂಧಿಸಿದ್ದಾರೆ. ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:53 am, Sun, 17 May 20