
ಬೀದರ್: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಸೋಂಕಿತ ಬೀದರ್ನ ವಿದ್ಯಾನಗರ ಕಾಲೋನಿಯಲ್ಲಿ ವಾಸವಾಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು.
ಬಿಪಿ, ಶುಗರ್ ಸೇರಿದಂತೆ ಹತ್ತಾರು ಖಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣ ಐಸೋಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದರವ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Published On - 11:59 am, Wed, 27 May 20