ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

|

Updated on: Apr 19, 2020 | 5:34 PM

ಮಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಮಂಗಳೂರಿನ ಕೊವಿಡ್ 19 ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ನಿನ್ನೆ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ತೋರಿಸಿದ್ದರು. ಅಲ್ಲಿಂದ ಕೊರೊನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಹಿಳೆಯ ಸ್ಯಾಂಪಲ್ಸ್ ಅನ್ನು ನಿನ್ನೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದ್ರೆ ಇಂದು ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ಈಗ ಬಂದ ವರದಿಯಲ್ಲಿ […]

ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!
Follow us on

ಮಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಮಂಗಳೂರಿನ ಕೊವಿಡ್ 19 ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ನಿನ್ನೆ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ತೋರಿಸಿದ್ದರು. ಅಲ್ಲಿಂದ ಕೊರೊನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಹಿಳೆಯ ಸ್ಯಾಂಪಲ್ಸ್ ಅನ್ನು ನಿನ್ನೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದ್ರೆ ಇಂದು ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಮೃತಪಟ್ಟಿದ್ದಾರೆ. ಈಗ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದ 50ವರ್ಷದ ಮಹಿಳೆ ಮೃತಪಟ್ಟಿರುವ ಕಾರಣ ಬಂಟ್ವಾಳ ಕೆಳಗಿನಪೇಟೆ ಸೀಲ್​ಡೌನ್ ಮಾಡಲಾಗಿದೆ. ಮನೆಯಿಂದ ಯಾರೂ ಹೊರಬರದಂತೆ ಬಂಟ್ವಾಳ ಪೊಲೀಸರ ಎಚ್ಚರಿಕೆ ನೀಡಿದ್ದಾರೆ.