ಚಿತ್ರದುರ್ಗದ ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಸಾವು

|

Updated on: May 17, 2020 | 12:39 PM

ಚಿತ್ರದುರ್ಗ: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿದ್ದ 55 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಎದೆನೋವಿನಿಂದ ಬಳಲುತ್ತಿದ್ದರು. ಇವರು ತಬ್ಲಿಘಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಇವರನ್ನು ಕಳೆದ 8 ದಿನಗಳಿಂದ ಚಿತ್ರದುರ್ಗದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ತಬ್ಲಿಘಿಗಳಿಗೆ ಆಹಾರ ನೀಡಲು ತೆರಳಿ ಸಂಪರ್ಕ ಹೊಂದಿದ್ದರು ಎಂದು ತಿಳಿಸಲಾಗಿದೆ. ಹಾಸ್ಟೆಲ್‌ ಕ್ವಾರಂಟೈನ್ ಕೇಂದ್ರದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಚಿತ್ರದುರ್ಗದ ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಸಾವು
Follow us on

ಚಿತ್ರದುರ್ಗ: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿದ್ದ 55 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಎದೆನೋವಿನಿಂದ ಬಳಲುತ್ತಿದ್ದರು. ಇವರು ತಬ್ಲಿಘಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಇವರನ್ನು ಕಳೆದ 8 ದಿನಗಳಿಂದ ಚಿತ್ರದುರ್ಗದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ತಬ್ಲಿಘಿಗಳಿಗೆ ಆಹಾರ ನೀಡಲು ತೆರಳಿ ಸಂಪರ್ಕ ಹೊಂದಿದ್ದರು ಎಂದು ತಿಳಿಸಲಾಗಿದೆ. ಹಾಸ್ಟೆಲ್‌ ಕ್ವಾರಂಟೈನ್ ಕೇಂದ್ರದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Published On - 8:17 am, Sun, 17 May 20