ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆ ಆತ್ಮಹತ್ಯೆ

ಬೆಂಗಳೂರು: ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ 60 ವರ್ಷದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೋವಿಡ್ ವಾರ್ಡ್​ನಲ್ಲಿ ಶ್ರೀರಾಮಪುರ ನಿವಾಸಿ ಕೊರೊನಾ ಸೋಂಕಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ. ಈ ಹಿಂದೆಯೂ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೃದ್ಧ ಕೊರೊನಾ ಪೇಶೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಇಬ್ಬರು ಇದೇ ರೀತಿ ಸಾವನ್ನಪ್ಪಿದ್ದರು. ಒಬ್ಬರು ಬಿಲ್ಡಿಂಗ್​ನಿಂದ ಹಾರಿ ಮೃತಪಟ್ಟಿದ್ದರೇ ಮತ್ತೊಬ್ಬರು […]

ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆ ಆತ್ಮಹತ್ಯೆ

Updated on: Jul 17, 2020 | 10:21 AM

ಬೆಂಗಳೂರು: ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ 60 ವರ್ಷದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೋವಿಡ್ ವಾರ್ಡ್​ನಲ್ಲಿ ಶ್ರೀರಾಮಪುರ ನಿವಾಸಿ ಕೊರೊನಾ ಸೋಂಕಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ. ಈ ಹಿಂದೆಯೂ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೃದ್ಧ ಕೊರೊನಾ ಪೇಶೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಲ್ಲದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಇಬ್ಬರು ಇದೇ ರೀತಿ ಸಾವನ್ನಪ್ಪಿದ್ದರು. ಒಬ್ಬರು ಬಿಲ್ಡಿಂಗ್​ನಿಂದ ಹಾರಿ ಮೃತಪಟ್ಟಿದ್ದರೇ ಮತ್ತೊಬ್ಬರು ಆಸ್ಪತ್ರೆ ಒಳಗಡೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ರೀತಿ ಕೊರೊನಾ ಸೋಂಕಿತರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

Published On - 10:02 am, Fri, 17 July 20