ಮುಂದುವರಿದ ಕೊರೊನಾ ಅಟ್ಟಹಾಸ, ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಸಾವು!
ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರು: ಹೆಮ್ಮಾರಿ ಕೊರೊನಾ ಕರುನಾಡಿಗೆ ಕಾಲಿಟ್ಟ ಗಳಿಗೆಯಿಂದ ಅಟ್ಟಹಾಸ ಮೆರೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಬೆಂಗಳೂರಿನ ಹಳೆಗುಡ್ಡದಹಳ್ಳಿ ನಿವಾಸಿ 65 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಏ.15ರಂದು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ರಾಜ್ಯದಲ್ಲಿ ಹೊಸದಾಗಿ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಅದರಲ್ಲಿ 104 ಜನ ಕೊರೊನಾದಿಂದ ಗುಣಮುಖರಾಗಿದ್ದು, 15 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.
Published On - 3:22 pm, Sun, 19 April 20