AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ

ಭಾರತದ ಷೇರು ಮಾರ್ಕೆಟ್​ನ ಅತ್ಯಂತ ಮೌಲ್ಯಯುತ 10 ಕಂಪೆನಿಗಳ ಪೈಕಿ 8ರ ಮಾರುಕಟ್ಟೆ ಮೌಲ್ಯ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಇನ್ನು ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಎಫ್​ಪಿಐನಿಂದ 5156 ಕೋಟಿ ರೂ. ನಿವ್ವಳವಾಗಿ ಹಿಂಪಡೆಯಲಾಗಿದೆ.

ಭಾರತದ ಷೇರು ಮಾರ್ಕೆಟ್​ನ ಈ 8 ಕಂಪೆನಿಗಳ ಮೌಲ್ಯ ಒಂದೇ ವಾರದಲ್ಲಿ 1.94 ಲಕ್ಷ ಕೋಟಿ ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 07, 2021 | 1:40 PM

Share

ಭಾರತದ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಎಂಟರ ಮಾರುಕಟ್ಟೆ ಮೌಲ್ಯ ಕಳೆದ ವಾರ 1.94 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆ ಕಂಡಿರುವುದು ರಿಲಯನ್ಸ್ ಇಂಡಸ್ಟ್ರೀಸ್ ಲಿ. ಇನ್ನು ಇದಕ್ಕೆ ವ್ಯತಿರಿಕ್ತವಾಗಿ ಎಚ್​​ಡಿಎಫ್​ಸಿ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಮಾರುಕಟ್ಟೆ ಮೌಲ್ಯ ಇಳಿಕೆ ಕಂಡಿದೆ. ಇದರಲ್ಲಿ ರಿಲಯನ್ಸ್ ಕಂಪೆನಿಯ ಮೌಲ್ಯದಲ್ಲಿ ರೂ. 60,034.51 ಕೋಟಿ ಹೆಚ್ಚಳವಾಗಿ, ಒಟ್ಟಾರೆ ಮಾರುಕಟ್ಟೆ ಮೌಲ್ಯವು ರೂ. 13,81,078.86 ಕೋಟಿಯನ್ನು ಮುಟ್ಟಿದೆ.

ಕಳೆದ ವಾರ ಯಾವ ಕಂಪೆನಿಗಳ ಮಾರುಕಟ್ಟೆ ಮೌಲ್ಯ ಎಷ್ಟು ಹೆಚ್ಚಾಗಿದೆ ಎಂಬ ವಿವರ ಹೀಗಿದೆ: 1. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ರೂ. 41,048.98 ಕೋಟಿ 2. ಕೊಟಕ್ ಮಹೀಂದ್ರಾ ಬ್ಯಾಂಕ್ ರೂ.28,011.19 ಕೋಟಿ 3. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್​ಯುಎಲ್) ರೂ. 16,388 ಕೋಟಿ 4. ಇನ್ಫೋಸಿಸ್ ರೂ. 27,114.19 ಕೋಟಿ 5. ಐಸಿಐಸಿಐ ಬ್ಯಾಂಕ್ ರೂ. 8,424.22 ಕೋಟಿ 6. ಎಚ್​ಡಿಎಫ್​ಸಿ ರೂ. 1038 ಕೋಟಿ 7. ಬಜಾಜ್ ಫೈನಾನ್ಸ್ 12,419.32 ಕೋಟಿ

ಇನ್ನು ಎಚ್​ಡಿಎಫ್​​ಸಿ ಬ್ಯಾಂಕ್ ಮೌಲ್ಯವು ರೂ. 2590.08 ಕೋಟಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾರುಕಟ್ಟೆ ಮೌಲ್ಯವು ರೂ. 5711.75 ಕೋಟಿ ಇಳಿಕೆ ಆಗಿದೆ.

ಭಾರತ ಅತ್ಯಂತ ಮೌಲ್ಯಯುತ ಕಂಪೆನಿಗಳು ಹೀಗಿವೆ: ರಿಲಯನ್ಸ್ ಇಂಡಸ್ಟ್ರೀಸ್, ಟಿಸಿಎಸ್, ಎಚ್​ಡಿಎಫ್​ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಎಚ್​ಡಿಎಫ್​ಸಿ, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬಜಾಜ್ ಫೈನಾನ್ಸ್.

ಎಫ್​ಪಿಐನಿಂದ 5,156 ಕೋಟಿ ರೂ. ವಾಪಸ್: ಮಾರ್ಚ್ 1ರಿಂದ 5ನೇ ತಾರೀಕಿನ ಮಧ್ಯೆ ಫಾರಿನ್ ಪೋರ್ಟ್​​ಫೋಲಿಯೋ ಇನ್ವೆಸ್ಟರ್ಸ್ ಈಕ್ವಿಟಿಯಿಂದ ನಿವ್ವಳವಾಗಿ ರೂ. 881 ಕೋಟಿ ಹಾಗೂ ಡೆಟ್ ಸೆಗ್ಮಟ್​ನಿಂದ ರೂ. 4,275 ಕೋಟಿ ಹಿಂಪಡೆದಿದ್ದಾರೆ. ಒಟ್ಟಾರೆಯಾಗಿ 5,156 ಕೋಟಿ ರೂಪಾಯಿ ಹಿಂತೆಗೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಎಫ್​ಪಿಐನಿಂದ ರೂ. 23,663 ಕೋಟಿ ಹಾಗೂ ಜನವರಿಯಲ್ಲಿ 14,649 ಕೋಟಿ ರೂಪಾಯಿ ಹೂಡಲಾಗಿತ್ತು.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ