AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು […]

ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 13, 2020 | 7:41 PM

Share

ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಶಿಬಿರಗಳತ್ತ ಗುಂಡು ಹಾರಿಸಿದಾಗ ಪ್ರತಿದಾಳಿ ನಡೆಸಿದ ಭಾರತದ ಯೋಧರು ಕನಿಷ್ಠ 8 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದಾರೆ, ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ ಭಾರತೀಯ ಸೈನಿಕರ ಗುಂಡಿಗೆ ಬಲಿಯಾದ ಪಾಕ್ ಯೋಧರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಸೇವಾ ಗುಂಪಿಗೆ ಸೇರಿದ 2-3 ಕಮಾಂಡೊಗಳು ಸಹ ಸೇರಿದ್ದಾರೆ.

ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ 10-12 ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಅವರ ಸೇನಾ ಬಂಕರ್, ಲಾಂಚ್ ಪ್ಯಾಡ್ ಮತ್ತು ಇಂಧನ ತುಂಬಿಸಿಟ್ಟಿದ್ದ ಬ್ಯಾರೆಲ್​ಗಳನ್ನು ಧ್ವಂಸಗೊಳಿಸಲಾಗಿದೆಯೆಂದು, ಮೂಲಗಳ ಹೇಳಿಕೆಯನ್ನು ಆಧರಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಶುಕ್ರವಾರದಂದು ಗುರೆಜ್ ಸೆಕ್ಟರ್, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಪ್ರದೇಶಗಳ ಹಲವಾರು ಕಡೆಗಳಲ್ಲಿ ಪಾಕಿಸ್ತಾನದ ಸೈನಿಕರು ಮನಬಂದಂತೆ ಗಂಡು ಹಾರಿಸಿದ ಪರಿಣಾಮವಾಗಿ ನಾಲ್ವರು ಭದ್ರತಾ ಸಿಬ್ಬಂದಿ, ಒಬ್ಬ ಗಡಿ ಭದ್ರತಾ ದಳದ ಇನ್ಸ್​ಪೆಕ್ಟರ್ ಮತ್ತು ನಾಲ್ವರು ನಾಗರಿಕರು ಬಲಿಯಾಗಿದ್ದಾರೆ, ಎಂದು ಭದ್ರತಾ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!