ಬೆಂಗಳೂರಿನಲ್ಲಿ ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಜುಲೈ 2ರಂದು ವರದಿ ಪಾಸಿಟಿವ್ ಬಂದಿದೆ. ಈ ವೇಳೆ ರೋಗಿಯನ್ನ ದಾಖಲಿಸಿಕೊಳ್ಳಲು ಸರ್ಕಾರ ನಿಗದಿಪಡಿಸಿರುವ ನಗರದ ಎರಡು ಆಸ್ಪತ್ರೆಗಳು ನಿರಾಕರಿಸಿವೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿಲ್ಲ, ಸ್ಥಳೀಯ ಆರೋಗ್ಯಾಧಿಕಾರಿಗಳ ಅನುಮತಿ ಇಲ್ಲ ಎಂದು ಸೋಂಕಿತನನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಹಿಂದೇಟು […]
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಜುಲೈ 2ರಂದು ವರದಿ ಪಾಸಿಟಿವ್ ಬಂದಿದೆ. ಈ ವೇಳೆ ರೋಗಿಯನ್ನ ದಾಖಲಿಸಿಕೊಳ್ಳಲು ಸರ್ಕಾರ ನಿಗದಿಪಡಿಸಿರುವ ನಗರದ ಎರಡು ಆಸ್ಪತ್ರೆಗಳು ನಿರಾಕರಿಸಿವೆ.
ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿಲ್ಲ, ಸ್ಥಳೀಯ ಆರೋಗ್ಯಾಧಿಕಾರಿಗಳ ಅನುಮತಿ ಇಲ್ಲ ಎಂದು ಸೋಂಕಿತನನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಹಿಂದೇಟು ಹಾಕಿವೆ. ಹೀಗಾಗಿ ತಂದೆಯನ್ನು ಮನೆಗೆ ಪುತ್ರ ಕರೆದುಕೊಂಡು ಬಂದಿದ್ದಾನೆ. ಎಲ್ಲಾ ವ್ಯವಸ್ಥೆ ಮಾಡುವಷ್ಟರಲ್ಲಿ ವೃದ್ಧ ಮೃತಪಟ್ಟಿದ್ದಾರೆ.