Tumakuru News: ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ.
ತುಮಕೂರು: ಜಿಲ್ಲೆಯ ತುರುವೇಕೆರೆ (Turuvekere) ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ (Student) ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ (Presedent) ಪತ್ರ ಬರೆದಿದ್ದಾಳೆ. ಹೌದು ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ (Government High School) 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ.
ಪತ್ರದ ಸಾರಾಂಶ
ನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯವಾಗಿದೆ.
ಇದೀಗ ನಾವು ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ಮನೆ ಕಟ್ಟಲು ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ವಿದ್ಯಾರ್ಥಿನಿ ಲಕ್ಷ್ಮೀ ಪತ್ರ ಬರೆದಿದ್ದಾಳೆ. ಇನ್ನು ವಿದ್ಯಾರ್ಥಿನಿ ಲಕ್ಷ್ಮೀಯನ್ನು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಭೇಟಿ ಮಾಡಿ ಅಹವಾಲು ಆಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ