ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು: ಚಾಲಕನನ್ನ ಬೆನ್ನಟ್ಟಿ ಹಿಡಿದ ಪೊಲೀಸರು
ಚಿಕ್ಕಬಳ್ಳಾಪುರ:ಬೈಕ್ ಸವಾರನಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚದಲಪುರ ವೃತ್ತದಲ್ಲಿ ಈ ಘಟನೆ ಸಂಭವಿಸಿದ್ದು, ವೆಂಕಟಪುರ ನಿವಾಸಿ ಮಂಜುನಾಥ ಮೃತ ಬೈಕ್ ಸವಾರ ಎನ್ನಲಾಗಿದೆ. ಬೈಕ್ ಸವಾರನಿಗೆ ಕ್ಯಾಂಟರ್ ಡಿಕ್ಕಿ ಹೊಡೆಸಿ ಪರಾರಿಯಾಗುತ್ತಿದ್ದ ಕ್ಯಾಂಟರ್ ಚಾಲಕನನ್ನು ನಂದಿಗಿರಿ ಗ್ರಾಮದ ಪೊಲೀಸರು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಸದ್ಯ ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ […]

ಚಿಕ್ಕಬಳ್ಳಾಪುರ:ಬೈಕ್ ಸವಾರನಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚದಲಪುರ ವೃತ್ತದಲ್ಲಿ ಈ ಘಟನೆ ಸಂಭವಿಸಿದ್ದು, ವೆಂಕಟಪುರ ನಿವಾಸಿ ಮಂಜುನಾಥ ಮೃತ ಬೈಕ್ ಸವಾರ ಎನ್ನಲಾಗಿದೆ. ಬೈಕ್ ಸವಾರನಿಗೆ ಕ್ಯಾಂಟರ್ ಡಿಕ್ಕಿ ಹೊಡೆಸಿ ಪರಾರಿಯಾಗುತ್ತಿದ್ದ ಕ್ಯಾಂಟರ್ ಚಾಲಕನನ್ನು ನಂದಿಗಿರಿ ಗ್ರಾಮದ ಪೊಲೀಸರು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.
ಸದ್ಯ ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
Published On - 4:10 pm, Mon, 17 August 20