ಪಾದಯಾತ್ರಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಮಾದಪ್ಪನ ಭಕ್ತ ಸಾವು

| Updated By: ವಿವೇಕ ಬಿರಾದಾರ

Updated on: Oct 08, 2022 | 4:22 PM

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಪಾದಯಾತ್ರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮಾದಪ್ಪನ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಾದಯಾತ್ರಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಮಾದಪ್ಪನ ಭಕ್ತ ಸಾವು
ಪ್ರಾತಿನಿಧಿಕ ಚಿತ್ರ
Follow us on

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಪಾದಯಾತ್ರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮಾದಪ್ಪನ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂಜನಗೂಡು ಮೂಲದ ಬಸವಣ್ಣ (55) ಮೃತ ದುರ್ದೈವಿ. ಬಸವಣ್ಣ ಪಾದಯಾತ್ರೆ ಮೂಲಕ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳ ವೇಗವಾಗಿ ಬಂದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿ. ಕೊಳ್ಳೇಗಾಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಸುಲಿಗೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳ ಬಂಧನ

ಬೆಂಗಳೂರು: ಸುಲಿಗೆ ಮಾಡಿ ಪರಾಯಾಗಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಿಶೋರ್ (19) ಸುಧಾಕರ್ (19) ಬಂಧಿತ ಆರೋಪಿಗಳು. ಆರೋಪಿಗಳು ಅಕ್ಟೋಬರ್ 4ರಂದು ರಾತ್ರಿ ವೇಳೆ ವ್ಯಕ್ತಿಗೆ ಚಾಕು ತೋರಿಸಿ ಮೊಬೈಲ್, ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 51ಸಾವಿರ ಮೌಲ್ಯದ 4 ಮೊಬೈಲ್, 1ಸಾವಿರ ಹಣ, ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ.

ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ: ಅಂಕೋಲ ತಾಲೂಕಿನ ಶಿರೂರಿನಲ್ಲಿ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ. ಕಾರು ಕುಂದಾಪುರದಿಂದ ವಿಜಯಪುರ ಜಿಲ್ಲೆಗೆ ತೆರಳುತ್ತಿತ್ತು. ಅಂಕೋಲ ಕಡೆಯಿಂದ ಕುಮಟಾ ಕಡೆಗೆ ತೆರಳುತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ