AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹ ನೀಡದೆ ಆಕಾಶ್ ಆಸ್ಪತ್ರೆಯ ಎಡವಟ್ಟು, ಈಗ ಸೆಟಲ್ಮೆಂಟ್​ಗೆ ಕರೆಯುತ್ತಿದ್ದಾರಂತೆ!

ಬೆಂಗಳೂರು: ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವನ್ನಪ್ಪಿ 3 ದಿನವಾದರೂ, ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಸಂಬಂಧಿಕರಿಗೆ ನೀಡದ ಕಾರಣ, ಸಂಬಂಧಿಕರು ಆಸ್ಪತ್ರೆ ವಿರುದ್ಧ ಕಿಡಿಕಾರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಪಿ ಅಗ್ರಹಾರದ 53 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಹೀಗಾಗಿ ವ್ಯಕ್ತಿಯನ್ನು ಬಿಬಿಎಂಪಿ ಆದೇಶದ ಮೇರೆಗೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಮರುದಿನವೇ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸೆಟಲ್ಮೆಂಟ್ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದಾರೆ ಆದರೆ ಮೂರು ದಿನವಾದರೂ ಆಸ್ಪತ್ರೆ […]

ದೇಹ ನೀಡದೆ ಆಕಾಶ್ ಆಸ್ಪತ್ರೆಯ ಎಡವಟ್ಟು, ಈಗ ಸೆಟಲ್ಮೆಂಟ್​ಗೆ ಕರೆಯುತ್ತಿದ್ದಾರಂತೆ!
ಸಾಧು ಶ್ರೀನಾಥ್​
|

Updated on: Aug 03, 2020 | 4:33 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವನ್ನಪ್ಪಿ 3 ದಿನವಾದರೂ, ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಸಂಬಂಧಿಕರಿಗೆ ನೀಡದ ಕಾರಣ, ಸಂಬಂಧಿಕರು ಆಸ್ಪತ್ರೆ ವಿರುದ್ಧ ಕಿಡಿಕಾರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆಪಿ ಅಗ್ರಹಾರದ 53 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಹೀಗಾಗಿ ವ್ಯಕ್ತಿಯನ್ನು ಬಿಬಿಎಂಪಿ ಆದೇಶದ ಮೇರೆಗೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಮರುದಿನವೇ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸೆಟಲ್ಮೆಂಟ್ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದಾರೆ ಆದರೆ ಮೂರು ದಿನವಾದರೂ ಆಸ್ಪತ್ರೆ ಸಿಬ್ಬಂದಿ ವ್ಯಕ್ತಿಯ ಮೃತದೇಹವನ್ನು ಸಂಬಂಧಿಕರಿಗೆ ನೀಡಿಲ್ಲ. ಹೀಗಾಗಿ ಕುಟುಂಬಸ್ಥರು ಬಿಬಿಎಂಪಿ ಅಧಿಕಾರಿಗಳ ಮೊರೆಹೋಗಿದ್ದಾರೆ. ಆದರೆ ಅಲ್ಲೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ 3 ದಿನಗಳ ಅಂತರ ಕುಟುಂಬಸ್ಥರಿಗೆ ಕರೆ ಮಾಡಿದ ಖಾಸಗಿ ಆಸ್ಪತ್ರೆ ಸಿಬ್ಬಂದಿ, ಒಟ್ಟಾರೆಯಾಗಿ 5 ಮೃತದೇಹಗಳಿವೆ. ಅದರಲ್ಲಿ ನಿಮ್ಮ ಸಂಬಂಧಿಕರ ಮೃತದೇಹ ಯಾವುದು ಎಂಬುದನ್ನು ಗುರುತು ಮಾಡಿ ಎನ್ನುತ್ತಿದ್ದಾರೆ.

ಮೃತಪಟ್ಟು ಮೂರು ದಿನ ಕಳೆದಿರುವುದರಿಂದ ಕುಟುಂಬಸ್ಥರಿಗೆ ಮೃತದೇಹ ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೂರು ದಿನಗಳಿಂದ ಆಸ್ಪತ್ರೆಯವರು ಮೃತದೇಹ ಇಟ್ಟುಕೊಂಡು ನಮ್ಮನ್ನು ಸತಾಯಿಸಿದ್ದಾರೆ. ಈಗ ಸೆಟಲ್ಮೆಂಟ್ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದಾರೆ. ಹೀಗಾಗಿ ಇಂತಹವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮೃತನ ಸಂಬಂಧಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು