ಜಾತಿ-ಜಮೀನು ವಿವಾದ: ಮಸಗಲ್ಲಿ ಎಂಬಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಮಾರಾಮಾರಿ ನಡೆದಿದ್ದು,ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಸಗಲ್ಲಿ ಗ್ರಾಮದ ಮತ್ತಿಕೊಪ್ಪದ ಮಳವಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಗ್ರಾಮದಲ್ಲಿ ಮೊದಲು ಜಗಳ ಆರಂಭವಾಗಿದೆ. ಜಾತಿಯ ಬಣ್ಣವೂ ಬಳಿದುಕೊಂಡಿದೆ.. ನಂತರ ಈ ಜಗಳ ವಿಕೋಪಕ್ಕೆ ತಿರುಗಿ ಜಾತಿಯ ಬಣ್ಣ ಬಳಿದುಕೊಂಡಿದೆ. ಹೀಗಾಗಿ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಹೊಡೆದಾಟದಲ್ಲಿ ನಾಲ್ವರು […]

ಜಾತಿ-ಜಮೀನು ವಿವಾದ: ಮಸಗಲ್ಲಿ ಎಂಬಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

Updated on: Aug 31, 2020 | 11:40 AM

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಮಾರಾಮಾರಿ ನಡೆದಿದ್ದು,ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಸಗಲ್ಲಿ ಗ್ರಾಮದ ಮತ್ತಿಕೊಪ್ಪದ ಮಳವಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಗ್ರಾಮದಲ್ಲಿ ಮೊದಲು ಜಗಳ ಆರಂಭವಾಗಿದೆ.

ಜಾತಿಯ ಬಣ್ಣವೂ ಬಳಿದುಕೊಂಡಿದೆ..
ನಂತರ ಈ ಜಗಳ ವಿಕೋಪಕ್ಕೆ ತಿರುಗಿ ಜಾತಿಯ ಬಣ್ಣ ಬಳಿದುಕೊಂಡಿದೆ. ಹೀಗಾಗಿ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಹೊಡೆದಾಟದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಗಲಭೆಯನ್ನು ತಿಳಿಗೊಳಿಸಿದ್ದಾರೆ. ಜೊತೆಗೆ ಮಾರಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಮಣಿಪಾಲ ಮತ್ತು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

Published On - 11:39 am, Mon, 31 August 20