ಬೆಂಗಳೂರು, (ಅಕ್ಟೋಬರ್ 24): ವ್ಯಕ್ತಿಯೋರ್ವ ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಇಂದು (ಅಕ್ಟೋಬರ್ 24)) ಬೆಳಗ್ಗೆ 11:30ರ ಸುಮಾರಿಗೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಕೆಂಚನಪುರದಲ್ಲಿ ಪುನರ್ವಸತಿ ಕೇಂದ್ರ ಕಟ್ಟಡ ಮೇಲಿಂದ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಜ್ಞಾನಭಾರತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆ ವ್ಯಕ್ತಿ ಯಾರು? ಯಾಕಾಗಿ ಬಿದ್ದು ಸತ್ತ ಎನ್ನುವ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.
ಕೋಲಾರ: ವ್ಯಕ್ತಿಯೋರ್ವ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ನಗರದ ಕೋಲಾರಮ್ಮ ಕರೆಯ ಬಳಿ ಹೆದ್ದಾರಿ ಪಕ್ಕದಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದ ಮಂಜುನಾಥ್ (30) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳಲು ಕತ್ತುಕೊಯ್ದುಕೊಂಡು ರಕ್ತದ ಮಡುವಿನಲ್ಲಿದ್ದ ಮಂಜುನಾಥ್ನನ್ನ ಸ್ಥಳೀಯರು ನೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ,
Published On - 12:44 pm, Tue, 24 October 23