ಬೆಳ್ಳಂಬೆಳಗ್ಗೆ RFO ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ರೇಡ್

  • TV9 Web Team
  • Published On - 11:35 AM, 10 Jun 2020
ಬೆಳ್ಳಂಬೆಳಗ್ಗೆ RFO ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ರೇಡ್

ಕೋಲಾರ: ಶ್ರೀನಿವಾಸಪುರ RFO ರಾಮಕೃಷ್ಣಪ್ಪ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇರೆಗೆ ಬೆಂಗಳೂರಿನ 3ಕ್ಕೂ ಹೆಚ್ಚು ಅಧಿಕಾರಿಗಳ ತಂಡ ರೇಡ್ ಮಾಡಿದ್ದಾರೆ. ಅಲ್ಲದೆ ಇಂದು ಬೆಳಗ್ಗೆ ರಾಜ್ಯದ ವಿವಿಧೆಡೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶ್ರೀನಿವಾಸಪುರದಲ್ಲಿರುವ RFO ಕಚೇರಿ ಸೇರಿದಂತೆ ಬಂಗಾರಪೇಟೆಯ ವಿಜಯನಗರದಲ್ಲಿರುವ ಮನೆ ಮೇಲೆ ರೇಡ್ ಮಾಡಿದ್ದಾರೆ. ಮನೆ ಹಾಗೂ ಕಚೇರಿಗಳಲ್ಲಿ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್‌ಎಫ್‌ಒ ರಾಮಕೃಷ್ಣಪ್ಪ ಹಾಗೂ ಕುಟುಂಬಸ್ಥರನ್ನು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.