KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ. ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. […]

KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ
Follow us
ಆಯೇಷಾ ಬಾನು
|

Updated on:Jun 12, 2020 | 2:18 PM

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ.

ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. ಹೀಗಾಗಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ.

ಸದ್ಯ ಲಂಚ ಸ್ವೀಕಾರ ಆರೋಪದಡಿ ದಾಸೇಗೌಡ ಅಮಾನತಿನಲ್ಲಿದ್ದಾರೆ. ಮಂಗಳೂರಿನಲ್ಲಿ 1 ಫ್ಲ್ಯಾಟ್​ ಸೇರಿ ಮೂರ್ನಾಲ್ಕು ಮನೆಯಲ್ಲಿ ಶೋಧ ಕಾರ್ಯ ನಡೆದಿದೆ. ಬೆಂಗಳೂರು ಸೇರಿ ವಿವಿಧ ಕಡೆ 11 ಸೈಟ್, ಚಿನ್ನಾಭರಣ ಪತ್ತೆಯಾಗಿದೆ. ಹಾಗೂ ಮಂಡ್ಯದ ಕಾವೇರಿ ನಗರದ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿದೆ. ಅಲ್ಲದೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ದಾಸೇಗೌಡ ಆಡಿಟರ್ ಕುಮಾರ್ ಮನೆಯ ಮೇಲೆ ದಾಳಿ ನಡೆದಿದೆ.

Published On - 10:05 am, Fri, 12 June 20