ಬೆಂಗಳೂರು: ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್ ACB ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ACB ಬಲೆಗೆ ಬಿದ್ದಿದ್ದಾರೆ.
ವಿಶೇಷ ತಹಶೀಲ್ದಾರ್ ಲಕ್ಷ್ಮೀ ಜೊತೆಗೆ ಶಿರಸ್ತೆದಾರ ಪ್ರಸನ್ನ ಸಹ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಮೀನಿನ RTC ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ACB Dy SP ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.