ಛೇ! ನಿರಾಶ್ರಿತರಿಗೆ ಮನೆ ಕೊಡಿಸುವುದಕ್ಕೂ ಲಂಚ ಕೇಳಿದ.. ACB ಖೆಡ್ಡಾಗೆ ಬಿದ್ದ
ಕೊಡಗು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲೂ ನಿರಾಶ್ರಿತರಿಗೆ ಮನೆ ಕೊಡಿಸುವುದಾಗಿ ಹೇಳಿ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕರಿಸುವ ವೇಳೆ ಮಡಿಕೇರಿ ನಗರಸಭೆ ಬಿಲ್ ಕಲೆಕ್ಟರ್ ಲೋಹಿತ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ. ಮಡಿಕೇರಿ ನಿವಾಸಿ ಗಣೇಶ್ ಎಂಬಾತನಿಗೆ ಮನೆ ಕೊಡಿಸಲು ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ನಗರದ ಎಪಿಎಂಸಿ ಪ್ರಾಂಗಣದಲ್ಲಿ 20 ಸಾವಿರ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಹಿತ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ […]
ಕೊಡಗು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲೂ ನಿರಾಶ್ರಿತರಿಗೆ ಮನೆ ಕೊಡಿಸುವುದಾಗಿ ಹೇಳಿ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕರಿಸುವ ವೇಳೆ ಮಡಿಕೇರಿ ನಗರಸಭೆ ಬಿಲ್ ಕಲೆಕ್ಟರ್ ಲೋಹಿತ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.
ಮಡಿಕೇರಿ ನಿವಾಸಿ ಗಣೇಶ್ ಎಂಬಾತನಿಗೆ ಮನೆ ಕೊಡಿಸಲು ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ನಗರದ ಎಪಿಎಂಸಿ ಪ್ರಾಂಗಣದಲ್ಲಿ 20 ಸಾವಿರ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಹಿತ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Published On - 6:00 pm, Fri, 5 June 20