ಛೇ! ನಿರಾಶ್ರಿತರಿಗೆ ಮನೆ ಕೊಡಿಸುವುದಕ್ಕೂ ಲಂಚ ಕೇಳಿದ.. ACB ಖೆಡ್ಡಾಗೆ ಬಿದ್ದ

ಕೊಡಗು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲೂ ನಿರಾಶ್ರಿತರಿಗೆ ಮನೆ ಕೊಡಿಸುವುದಾಗಿ ಹೇಳಿ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕರಿಸುವ ವೇಳೆ ಮಡಿಕೇರಿ ನಗರಸಭೆ ಬಿಲ್ ಕಲೆಕ್ಟರ್ ಲೋಹಿತ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ. ಮಡಿಕೇರಿ ನಿವಾಸಿ ಗಣೇಶ್ ಎಂಬಾತನಿಗೆ ಮನೆ ಕೊಡಿಸಲು ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ನಗರದ ಎಪಿಎಂಸಿ ಪ್ರಾಂಗಣದಲ್ಲಿ 20 ಸಾವಿರ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಹಿತ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ […]

ಛೇ! ನಿರಾಶ್ರಿತರಿಗೆ ಮನೆ ಕೊಡಿಸುವುದಕ್ಕೂ ಲಂಚ ಕೇಳಿದ.. ACB ಖೆಡ್ಡಾಗೆ ಬಿದ್ದ
ಸಾಧು ಶ್ರೀನಾಥ್​

Updated on: Jun 05, 2020 | 6:04 PM

ಕೊಡಗು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲೂ ನಿರಾಶ್ರಿತರಿಗೆ ಮನೆ ಕೊಡಿಸುವುದಾಗಿ ಹೇಳಿ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕರಿಸುವ ವೇಳೆ ಮಡಿಕೇರಿ ನಗರಸಭೆ ಬಿಲ್ ಕಲೆಕ್ಟರ್ ಲೋಹಿತ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.

ಮಡಿಕೇರಿ ನಿವಾಸಿ ಗಣೇಶ್ ಎಂಬಾತನಿಗೆ ಮನೆ ಕೊಡಿಸಲು ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ನಗರದ ಎಪಿಎಂಸಿ ಪ್ರಾಂಗಣದಲ್ಲಿ 20 ಸಾವಿರ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಹಿತ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 6:00 pm, Fri, 5 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us