ಆಕಸ್ಮಿಕವಾಗಿ ಬೆಂಕಿ ತಗಲಿ ಗುಡಿಸಲಿನಲ್ಲಿದ್ದ ವ್ಯಕ್ತಿ ಸಜೀವ ದಹನ, ಎಲ್ಲಿ?

ರಾಯಚೂರು:ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಓರ್ವ ವ್ಯಕ್ತಿ ಹಾಗೂ ಒಂದು ಮೇಕೆ ಸಜೀವ ದಹನವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಅದಕ್ಕೆ ಅರಿಕೆರಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಗಪ್ಪ ತಾತೆ(40) ಅವಘಡದಲ್ಲಿ ಮೃತಪಟ್ಟ ದುರ್ದೈವಿ. ಶುಕ್ರವಾರ ತಡರಾತ್ರಿ ಗುಡಿಸಲಿನಲ್ಲಿ ನಾಗಪ್ಪ ತಾತೆ ಮಲಗಿದ್ದರು. ಈ ವೇಳೆ ಗುಡಿಸಲಿಗೆ ತಗುಲಿದ ಆಕಸ್ಮಿಕ ಬೆಂಕಿಯಿಂದಾಗಿ ಆತ ಮತ್ತು ಗುಡಿಸಲಿನ ಬಳಿ ಕಟ್ಟಲಾಗಿದ್ದ ಒಂದ ಮೇಕೆ  ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಜೊತೆಗೆ, ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ […]

ಆಕಸ್ಮಿಕವಾಗಿ ಬೆಂಕಿ ತಗಲಿ ಗುಡಿಸಲಿನಲ್ಲಿದ್ದ ವ್ಯಕ್ತಿ ಸಜೀವ ದಹನ, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Aug 22, 2020 | 1:30 PM

ರಾಯಚೂರು:ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಓರ್ವ ವ್ಯಕ್ತಿ ಹಾಗೂ ಒಂದು ಮೇಕೆ ಸಜೀವ ದಹನವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಅದಕ್ಕೆ ಅರಿಕೆರಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಗಪ್ಪ ತಾತೆ(40) ಅವಘಡದಲ್ಲಿ ಮೃತಪಟ್ಟ ದುರ್ದೈವಿ. ಶುಕ್ರವಾರ ತಡರಾತ್ರಿ ಗುಡಿಸಲಿನಲ್ಲಿ ನಾಗಪ್ಪ ತಾತೆ ಮಲಗಿದ್ದರು. ಈ ವೇಳೆ ಗುಡಿಸಲಿಗೆ ತಗುಲಿದ ಆಕಸ್ಮಿಕ ಬೆಂಕಿಯಿಂದಾಗಿ ಆತ ಮತ್ತು ಗುಡಿಸಲಿನ ಬಳಿ ಕಟ್ಟಲಾಗಿದ್ದ ಒಂದ ಮೇಕೆ  ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಹ ಸುಟ್ಟು ಭಸ್ಮವಾಗಿದೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಘಟನೆಗೆ ನಿಖರ ಕಾರಣವನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ.

 

 

 

 

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us