ಕೆ.ಕಲ್ಯಾಣ್ ದಾಂಪತ್ಯ ಕಲಹ: 5 ಕೋಟಿ ಆಸ್ತಿ ನುಂಗಿದ್ದ ಶಿವಾನಂದ ವಾಲಿ, ತನಿಖೆ ವೇಳೆ ಮಾಹಿತಿ ಬಹಿರಂಗ
ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾನಂದ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದೆ. ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಹೆಸರಿನಲ್ಲಿದ್ದ ಅಪಾರ ಆಸ್ತಿಯನ್ನು ಆರೋಪಿ ಶಿವಾನಂದ ವಾಲಿ ವರ್ಗಾವಣೆ ಮಾಡಿಕೊಂಡಿದ್ದಾನೆ. ಸುಮಾರು 5 ಕೋಟಿಯಷ್ಟು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾನಂತೆ. ಹಾಗೂ ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಅಕೌಂಟ್‌ನಿಂದ 45 ಲಕ್ಷ ಹಣ ತನ್ನ ಅಕೌಂಟ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಥಣಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ […]
ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾನಂದ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದೆ. ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಹೆಸರಿನಲ್ಲಿದ್ದ ಅಪಾರ ಆಸ್ತಿಯನ್ನು ಆರೋಪಿ ಶಿವಾನಂದ ವಾಲಿ ವರ್ಗಾವಣೆ ಮಾಡಿಕೊಂಡಿದ್ದಾನೆ.
ಸುಮಾರು 5 ಕೋಟಿಯಷ್ಟು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾನಂತೆ. ಹಾಗೂ ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಅಕೌಂಟ್‌ನಿಂದ 45 ಲಕ್ಷ ಹಣ ತನ್ನ ಅಕೌಂಟ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಥಣಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ಇದ್ದ ಆಸ್ತಿಗಳನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಅಥಣಿ ತಾಲೂಕಿನ ಶಿರಹಟ್ಟಿ ಬಳಿಯ ತೋಟ, ಅಶ್ವಿನಿಯಿಂದ ಅಪಾರ ಪ್ರಮಾಣದ ಚಿನ್ನಾಭರಣ ಸಹ ಪಡೆದುಕೊಂಡಿದ್ದಾನೆ.
ಶಿವಾನಂದ ವಾಲಿ, ಗಂಗಾ ಕುಲಕರ್ಣಿ ವಿರುದ್ಧ ಆರೋಪಿಸಿ ಕೆ.ಕಲ್ಯಾಣ್ ತನ್ನ ಪತ್ನಿ ಅಶ್ವಿನಿ, ಅತ್ತೆ, ಮಾವ ಅಪಹರಣವಾಗಿದೆ ಎಂದು ದೂರು ನೀಡಿದ್ದರು. ಕೆ.ಕಲ್ಯಾಣ್ ದೂರಿನ ಮೇರೆಗೆ ಮಾಳಮಾರುತಿ ಠಾಣೆಯಲ್ಲಿ FIR ದಾಖಲಾಗಿತ್ತು. ತನಿಖೆ ಕೈಗೊಂಡು ಆರೋಪಿ ಶಿವಾನಂದ ವಾಲಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ನಿನ್ನೆ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಈಗ ಮಾಳಮಾರುತಿ ಪೊಲೀಸರು ಶಿವಾನಂದ ವಾಲಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.