ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಲ್ಲ ಹೇಳಿಕೆ, ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆಯನ್ನು ನೀಡಿದ್ದಾರೆ: ಪೇಜಾವರ ಶ್ರೀ

ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆ ನೀಡುತ್ತಿದ್ದಾರೆ ಎಂದು ನಟ ಚೇತನ್ ವಿರುದ್ಧ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮದ್ದೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಲ್ಲ ಹೇಳಿಕೆ, ನಟ ಚೇತನ ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆಯನ್ನು ನೀಡಿದ್ದಾರೆ:  ಪೇಜಾವರ ಶ್ರೀ
ಪೇಜಾವರ ಶ್ರೀ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 22, 2022 | 7:21 PM

ಮಂಡ್ಯ: ನಟ ಚೇತನ (Chetan) ಚೀಪ್ ಪಬ್ಲಿಸಿಟಿಗೋಸ್ಕರ ಹೇಳಿಕೆ ನೀಡುತ್ತಿದ್ದಾರೆ ಎಂದು ಚೇತನ್ ವಿರುದ್ಧ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ (Sri Vishwaprasanna Theertha Swamiji) ಮದ್ದೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ದೇಶಕ, ನಟ ರಿಷಬ್​ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿದ ಕಾಂತಾರ (Kantara) ಚಿತ್ರದಲ್ಲಿ ತೋರಿಸಲಾದ ಭೂತಕೋಲ ಆರಾಧನೆ (Bhootkola) ಹಿಂದೂ (Hindu) ಸಂಸ್ಕೃತಿ ಅಲ್ಲ ಎಂದು ಚಿತ್ರ ನಟ, ಚೇತನ್​​ ಹೇಳಿದ್ದರು. ಈ ಕುರಿತು ಚೇತನ್​ ವ್ಯಾಪಕ ಟೀಕೆಗೆ ಗುರಿಯಾಗಿದ್ದರು, ಜೊತೆಗೆ ರಾಜ್ಯದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಹಿಂದೂ ಕಾರ್ಯಕರ್ತರು ದೂರು ನೀಡಿದ್ದರು.

ಚೇತನ್​ ಹೇಳಿಕೆಯನ್ನು ಖಂಡಿಸಿದ ಪೇಜಾವರ ಶ್ರೀಗಳು, ನಟ ಚೇತನ ಪ್ರಚಾರಕ್ಕಾಗಿ ಈ ರೀತಿಯಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಚೀಪ್ ಪ್ರಬ್ಲಿಸಿಟಿಗೆ ನಿದರ್ಶನವಾಗಿದೆ. ಯಾವುದಕ್ಕು ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಆಚರಣೆಗಳನ್ನು ವಿರೋಧಿಸುವುದು ತಪ್ಪು. ಅದು ಯಾವ ನೆಲೆಯಲ್ಲಿ ಮಾತನಾಡ್ತಿದ್ದಾರೊ ನನಗೆ ಅರ್ಥವಾಗುತ್ತಿಲ್ಲ. ಅವರು ನೋಡುವ ದೃಷ್ಟಿಕೋನದಲ್ಲಿ ಎಲ್ಲಾ ಅಡಗಿರುತ್ತದೆ. ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು ಅದರೊಳಗೆ ಬ್ರಾಹ್ಮಣತ್ವವು ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಟ ಚೇತನ ಹೇಳಿದ್ದೇನು

‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ಚೇತನ್​ ಅಭಿಪ್ರಾಯಪಟ್ಟಿದ್ದರು. ಈ ಕುರಿತು ಈಗ ಚರ್ಚೆ ಶುರುವಾಗಿದೆ.

ಕನ್ನಡದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಮೂಡಿಬಂದ ಈ ಚಿತ್ರವನ್ನು ರಿಷಬ್​ ಶೆಟ್ಟಿ ಅವರು ನಿರ್ದೇಶಿಸಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿದ್ದು, ಎಲ್ಲರೂ ‘ಕಾಂತಾರ’ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟ ಚೇತನ್​ ಅವರು ಬೇರೊಂದು ಆಯಾಮವನ್ನು ಮುಂದಿಟ್ಟಿದ್ದಾರೆ.

ಭೂತಕೋಲ ಬಗ್ಗೆ ಚೇತನ್​ ಹೇಳಿದ್ದೇನು?

‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಚೇತನ್​ ಪೋಸ್ಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Sat, 22 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ