ಕೊಡಗು ಜಿಲ್ಲೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ; 15 ಕೆಎಸ್​ಆರ್​ಪಿ ತುಕಡಿ ನಿಯೋಜನೆ

| Updated By: ವಿವೇಕ ಬಿರಾದಾರ

Updated on: Aug 24, 2022 | 5:56 PM

ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಣೆ ಜಾರಿ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಮಡಿಕೇರಿಗೆ ಭೇಟಿ ನೀಡಿದ್ದಾರೆ.

ಕೊಡಗು ಜಿಲ್ಲೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ; 15 ಕೆಎಸ್​ಆರ್​ಪಿ ತುಕಡಿ ನಿಯೋಜನೆ
ಎಡಿಜಿಪಿ ಅಲೋಕ್​ ಕುಮಾರ್​ ಪೊಲೀಸ್​ ಅಧಿಕಾರಿಗಳೊಂದಿಗೆ ಸಭೆ
Follow us on

ಕೊಡಗು: ಕೊಡಗು (Kodagu) ಜಿಲ್ಲೆಯಲ್ಲಿ ನಿಷೇಧಾಜ್ಣೆ ಜಾರಿ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಮಡಿಕೇರಿಗೆ (Madikeri) ಭೇಟಿ ನೀಡಿದ್ದಾರೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲನೆಗೆ ಆಗಮಿಸಿದ ಅಲೋಕ್ ಕುಮಾರ್ ಮಡಿಕೇರಿಯಲ್ಲಿ ಎಸ್ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಧ್ಯಕ್ಕೆ ಕೊಡಗು ಜಿಲ್ಲೆ ಶಾಂತಿಯಿಂದ ಇದೆ. ಒಟ್ಟು 15 ಕೆಎಸ್​ಆರ್​ಪಿ ತುಕಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಂತರರಾಜ್ಯ, ಅಂತರಜಿಲ್ಲಾ ಗಡಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಪ್ರವಾಸಿಗರು ಬರಲು ಯಾವುದೇ ಅಡ್ಡಿ ಇಲ್ಲ. ಜಿಲ್ಲೆಯಲ್ಲಿ ಐಜಿ ಪ್ರವೀಣ್ ಮಧುಕರ್ ಪವಾರ್ ಬೀಡುಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮಡಿಕೇರಿಗೆ ಐಜಿಪಿ ಭೇಟಿ

ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಮಡಿಕೇರಿಗೆ ದಕ್ಷಿಣ ವಲಯ ಐಜಿಪಿ ಮಧುಕರ್ ಪವಾರ್ ಭೇಟಿ ನೀಡಿ ಎಸ್​ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ, ಭದ್ರತೆ ಕುರಿತು ಸಮಾಲೋಚನೆ ನಡೆಸಿದ್ದರು.

ಕೊಡಗು ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಚೆಕ್​ಪೋಸ್ಟ್​ಗಳಲ್ಲಿ ಸೂಕ್ತ ತಪಾಸಣೆ, ಭದ್ರತೆ ನೀಡುತ್ತೇವೆ. ಜಿಲ್ಲೆಯ ಗಡಿಯಲ್ಲಿಯೂ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಕೊಡಗಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜನರು ನೆರವಾಗಬೇಕು. ಕೇರಳದಿಂದ ಪಿಎಫ್​ಐ ಕಾರ್ಯಕರ್ತರನ್ನು ಕರೆತರುವ ಶಂಕೆ ಹಿನ್ನೆಲೆಯಲ್ಲಿ ಗಡಿಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುವುದು ಎಂದು ಹೇಳಿದ್ದರು.

ನಿಷೇಧಾಜ್ಞೆ ಜಾರಿ

ಆಗಸ್ಟ್​ 26ಕ್ಕೆ ಮಡಿಕೇರಿಯಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಜಿಲ್ಲಾ ಪೊಲೀಸರು ಅನುಮತಿ ನೀಡಿಲ್ಲ. ಪ್ರತಿಭಟನೆ ಆಯೋಜಿಸಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇಂದು ಆಗಸ್ಟ್ 24 ಮಧ್ಯರಾತ್ರಿಯಿಂದ ಆಗಸ್ಟ್​ 27ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ 4 ದಿನ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆ ಹಾಗೂ ಯಾವುದೇ ಱಲಿ ನಡೆಸುವಂತಿಲ್ಲ. ಪೂರ್ವನಿಯೋಜಿತ ಸರ್ಕಾರಿ, ಖಾಸಗಿ ಕಾರ್ಯಕ್ರಮಕ್ಕೆ ಅಡ್ಡಿಯಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಜಿಲ್ಲೆಯಲ್ಲಿ ನಾಳೆ ಮಧ್ಯರಾತ್ರಿಯಿಂದ ಆಗಸ್ಟ್​ 26ರ ಮಧ್ಯರಾತ್ರಿವರೆಗೂ ಮದ್ಯಮಾರಾಟವನ್ನೂ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Wed, 24 August 22