AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾಗೆ ಕಳೆಗಟ್ಟಿದ ಮೈಸೂರು ಝೂ: ಗ್ರ್ಯಾಂಡ್​ ಎಂಟ್ರಿ ಕೊಟ್ಟ ಆಫ್ರಿಕಾದ 3 ಚೀತಾಗಳು!

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಹಸಿರು ನಿಶಾನೆ ತೋರುವ ಮೂಲಕ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಮೈಸೂರು ಮೃಗಾಲಯಕ್ಕೆ ಮೂರು ಹೊಸ ಚೀತಾವನ್ನು ಮೈಸೂರಿಗೆ ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್ ಬಿಟ್ಟರೆ ಮೈಸೂರಿನಲ್ಲಿ ಮಾತ್ರ ಇದೆ. ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ ಎಂದು ಸಚಿವರು ತಿಳಿಸಿದರು. ಸರಳ […]

ದಸರಾಗೆ ಕಳೆಗಟ್ಟಿದ ಮೈಸೂರು ಝೂ: ಗ್ರ್ಯಾಂಡ್​ ಎಂಟ್ರಿ ಕೊಟ್ಟ ಆಫ್ರಿಕಾದ 3 ಚೀತಾಗಳು!
ಸಾಧು ಶ್ರೀನಾಥ್​
|

Updated on:Oct 16, 2020 | 4:53 PM

Share

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಹಸಿರು ನಿಶಾನೆ ತೋರುವ ಮೂಲಕ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಮೈಸೂರು ಮೃಗಾಲಯಕ್ಕೆ ಮೂರು ಹೊಸ ಚೀತಾವನ್ನು ಮೈಸೂರಿಗೆ ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್ ಬಿಟ್ಟರೆ ಮೈಸೂರಿನಲ್ಲಿ ಮಾತ್ರ ಇದೆ. ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ ಎಂದು ಸಚಿವರು ತಿಳಿಸಿದರು.

ಸರಳ ದಸರಾವನ್ನು ಮಾತ್ರ ಆಚರಿಸಲಾಗುವುದು. ನಾಳೆ ಮೈಸೂರಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಜಿಲ್ಲಾಡಾಳಿತದಿಂದ ಈಗಾಗಲೇ ಎಲ್ಲ ಸಿದ್ಧತೆಗಳು ಆಗಿವೆ. ನಾಡಿದ್ದು ಮುಖ್ಯಮಂತ್ರಿಗಳು ನಾಡಹಬ್ಬ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ದಸರಾ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಬರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಹೇರಲಾಗುತ್ತದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ತಂಡ ನೀಡಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ. ಸಾರ್ವಜನಿಕ ನಿರ್ಬಂಧ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ರಾಜರಾಜೇಶ್ವರಿ ನಗರ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿಗಳಾದ ಮುನಿರತ್ನ ಅವರ ನಾಮಪತ್ರ ಸಲ್ಲಕೆ ವೇಳೆ ನಾನು ಉಪಸ್ಥಿತನಿದ್ದೆ. ಚುನಾವಣೆಯಲ್ಲಿ ಅವರು 30ರಿಂದ 40 ಸಾವಿರ ಲೀಡ್ ನೊಂದಿಗೆ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ದಸರಾ ಇರುವುದರಿಂದ ಎಲ್ಲ ಸಮಯ ಅಲ್ಲಿ ಇರಲು ಆಗುತ್ತಿಲ್ಲ. ರಾಜರಾಜೇಶ್ವರಿ ನಗರ ಸಹ ನನ್ನ ಕ್ಷೇತ್ರದ ಪಕ್ಕವೇ ಇರುವುದರಿಂದ ಗೆಲುವಿಗೆ ಇನ್ನಷ್ಟು ಹೆಚ್ಚಿಗೆ ಕೆಲಸ ಮಾಡಬಹುದಾಗಿದೆ ಎಂದು ಸಚಿವರು ತಿಳಿಸಿದರು.

ವಿಶ್ವನಾಥ್ ಅವರಿಗೆ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ಸಿಗಲು ನಾನು ಸಹ ಬಹಳಷ್ಟು ಪ್ರಯತ್ನಪಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಗೆ ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Published On - 1:04 pm, Thu, 15 October 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!