AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ. ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ […]

50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 3:19 PM

Share

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ.

ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ ಶರೀರಕ್ಕಾಗಿ ಪೋಷಕರು ಕಾದು ಕುಳಿತಿದ್ದಾರೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ಟೆಕ್ಕಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ವಿಳಂಬವಾಗಿದೆ. ಸೋಮವಾರ ಬೆಳಗಿನ ಜಾವ 3.30ಕ್ಕೆ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ. ನಂತರ ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿಗೆ ಮೃತದೇಹ ತಲುಪಲಿದೆ.

ಮಗನ ಪಾರ್ಥಿವ ಶರೀರ ಭಾರತಕ್ಕೆ ತರುವಂತೆ 15 ದಿನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಪೋಷಕರು ನೆರವು ಕೋರಿದ್ದರು. ಪೋಷಕರ ಮನವಿಗೆ ಸ್ಪಂದಿಸಿ ಶವ ತರಿಸಲು ಜೋಶಿ ಸಹಕಾರ ನೀಡಿದ್ದರು. ಈ ಸಂಬಂಧ ಕೇಂದ್ರ ಆರೋಗ್ಯ ಇಲಾಖೆ, ಲಂಡನ್‌ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!