ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ

ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
Follow us
ಪೃಥ್ವಿಶಂಕರ
|

Updated on: Mar 20, 2021 | 8:18 AM

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿವರೆಗೂ ಬೆಂಗಳೂರಿನಲ್ಲಿ ಜಾರಕಿಹೊಳಿ‌ ಸಹೋದರರ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ.. ಖಾಸಗಿ ಏಜೆನ್ಸಿ ಮೂಲಕ ಸಂಗ್ರಹಿಸಿರುವ ದಾಖಲೆಗಳನ್ನು ಅಗತ್ಯ ಸಂದರ್ಭದಲ್ಲಿ ಬಳಸಬಹುದು, ಸಿಡಿಯಲ್ಲಿರುವ ಯುವತಿ ವ್ಯತಿರಿಕ್ತ ಹೇಳಿಕೆ ಬಿಡುಗಡೆ ಮಾಡಿದರೂ ಧೃತಿಗೆಡಬೇಕಾಗಿಲ್ಲ, ನಮ್ಮ ಬಳಿ ಇರುವ ದಾಖಲೆಗಳ ಮೂಲಕವೇ ಪ್ರಕರಣವನ್ನು ಎದುರಿಸಬಹುದು, ನಾನು ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ‌ಗೆ ಧೈರ್ಯ ತುಂಬಿದ್ದಾರೆ. ಭಾನುವಾರ ಸಂಜೆ ವೇಳೆಗೆ ಮತ್ತೊಮ್ಮೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ‌ನಡೆಸಲು ಜಾರಕಿಹೊಳಿ‌ ಸಹೋದರರು ತೀರ್ಮಾನ ಮಾಡಿದ್ದಾರೆ.

ಎಸ್‌ಐಟಿ ಅಧಿಕಾರಿಗಳಿಂದ ಮತ್ತೊಮ್ಮೆ ಭವಿತ್ ವಿಚಾರಣೆ ವಿಡಿಯೋದಲ್ಲಿ ಹಿನ್ನೆಲೆ ಧ್ವನಿ ಸಂಬಂಧ ಭವಿತ್ ವಿಚಾರಣೆ ಮಾಡಲಾಗಿದೆ. ಇದಕ್ಕೂ ಮುನ್ನ ಒಮ್ಮೆ SIT ಅಧಿಕಾರಿಗಳಿಂದ ಭವಿತ್​ನನ್ನು ವಿಚಾರಣೆ ನಡೆಸಲಾಗಿತ್ತು. SIT ವಿಚಾರಣೆಯ ಬಳಿಕ ಭವಿತ್ ವಿಡಿಯೋ ಮಾಡಿ ಹರಿಬಿಟ್ಟಿದ್ದ. ವಿಡಿಯೋ ಬಗ್ಗೆ ಮಾನಿಟರ್ ಮಾಡಿದ್ದ SIT ಅಧಿಕಾರಿಗಳು, ವಿಡಿಯೋದಲ್ಲಿ ಉಲ್ಲೇಖಿಸಿದ ಅಂಶಗಳ ಆಧಾರದಲ್ಲಿ‌ ವಿಚಾರಣೆ ನಡೆಸಿದ್ದಾರೆ.

ಸ್ವಯಂಪ್ರೇರಿತ ಹೇಳಿಕೆ ವಿಡಿಯೋ ವೈರಲ್ ಆಗಿದ್ದು ಹೇಗೆ? ಹ್ಯಾಕರ್ ಬಿಟ್ಟು ಬೇಱರು ಟೆಕ್ನಿಕಲ್ ಸಾಥ್ ನೀಡ್ತಿರೋದು? ಯಾರ ಮೂಲಕ ವಿಡಿಯೋ ಮಾಡಿಸಲಾಗಿದೆ ಎಂದು ಪ್ರಶ್ನೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸತತ 3 ಗಂಟೆಗಳ ಕಾಲ ಎಸ್‌ಐಟಿಯಿಂದ ವಿಚಾರಣೆ ಮಾಡಲಾಗಿದ್ದು, ವಿಚಾರಣೆ ಬಳಿಕ ಭವಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಿಟ್ಟು ಕಳಿಸಿದ್ದಾರೆ.

ಇದನ್ನೂ ಓದಿ:ಸಿಡಿಯಲ್ಲಿರುವ ಯುವತಿ ನಿಮಗೆ ಪರಿಚಯವೇ? -ರಮೇಶ್ ಜಾರಕಿಹೊಳಿಗೆ SIT ಅಧಿಕಾರಿಗಳ ನೇರ ಪ್ರಶ್ನೆ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ