AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಈಗಲಾದ್ರೂ ನಮ್ಮ ಪರ ನಿಲ್ಲಲಿ -ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ ಅವರಿಗೆ ಕೇಳುತ್ತೇನೆ. ಸಂಪತ್ ರಾಜ್ ಆಸ್ಪತ್ರೆಯಿಂದ […]

ಡಿಕೆ ಶಿವಕುಮಾರ್ ಈಗಲಾದ್ರೂ ನಮ್ಮ ಪರ ನಿಲ್ಲಲಿ -ಅಖಂಡ ಶ್ರೀನಿವಾಸಮೂರ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 17, 2020 | 8:24 AM

Share

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ ಅವರಿಗೆ ಕೇಳುತ್ತೇನೆ. ಸಂಪತ್ ರಾಜ್ ಆಸ್ಪತ್ರೆಯಿಂದ ಏಕೆ ಓಡಿ ಹೋಗಬೇಕಿತ್ತು.. ಅವರು ತಪ್ಪು ಮಾಡಿದ್ದರಿಂದ ಓಡಿ ಹೋಗಿದ್ದಾರೆ. ನಾನು ಯಾವುದೇ ದ್ವೇಷದ ರಾಜಕಾರಣವನ್ನು ಮಾಡಿಲ್ಲ. ಈ ಹಿಂದೆಯೂ ಮಾಡಿಲ್ಲ, ಇನ್ನುಮುಂದೆಯೂ ಮಾಡಲ್ಲ. ಸಂಪತ್ ರಾಜ್ ನನ್ನ ಜತೆ ಚೆನ್ನಾಗಿಯೇ ಇದ್ದರು. ನನ್ನ ಜತೆಗಿದ್ದು ಇಂತಹ ಕೆಲಸ ಮಾಡುತ್ತಾರೆಂದು ಗೊತ್ತಿರಲಿಲ್ಲ. ಘಟನೆಯ ಬಳಿಕ ಸಂಪತ್ ರಾಜ್‌ರನ್ನ ಭೇಟಿಯಾಗಿಲ್ಲ. ಕಾಂಗ್ರೆಸ್ ಕೂಡ ನಮ್ಮನ್ನು ಕರೆಸಿ ಮಾತನಾಡಿಲ್ಲ ಎಂದು ಹೇಳಿದ್ರು.

ಇನ್ನು ನನಗೆ ನ್ಯಾಯ ಕೊಡಿಸುವುದಾಗಿ ಮಾತ್ರ ಡಿಕೆಶಿ ಹೇಳಿದ್ದಾರೆ. ನನಗೆ ಕಾಂಗ್ರೆಸ್ ಪಕ್ಷ ರಕ್ಷಣೆಗೆ ನಿಂತಿದೆ. ಘಟನೆಯ ಬಗ್ಗೆ ಹೈಕಮಾಂಡ್ ಗಮನಕ್ಕೂ ತರುತ್ತೇನೆ. ಮನೆಗೆ ಬೆಂಕಿ ಹಚ್ಚಿದ್ದರಿಂದ ಎಲ್ಲೋ ಹೊರಗಿರುವಂತಾಗಿದೆ. ರಾಜ್ಯದಲ್ಲಿ ಇಂತಹ ಘಟನೆ ಮರುಕಳಿಸಬಾರದು. ಕಾನೂನು ಪ್ರಕಾರ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನನಗೆ ಸಿದ್ದರಾಮಯ್ಯ, ಜಮೀರ್ ಧೈರ್ಯ ತುಂಬುತ್ತಿದ್ದಾರೆ ಎಂದು ಟಿವಿ9ಗೆ ‘ಕೈ’ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ತಲೆಮರೆಸಿಕೊಂಡು ಓಡಾಡ್ತಿದ್ದ ಸಂಪತ್​ ರಾಜ್ ಕೊನೆಗೂ ಬಂಧನ..

Published On - 8:23 am, Tue, 17 November 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ