ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ. ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ […]

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?
Follow us
Guru
| Updated By:

Updated on:Jul 06, 2020 | 1:58 PM

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ.

ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ ಬಂದರೂ ಅವರಿಗೆ ನೋ ಎಂಟ್ರಿ ಎಂದು ಹೇಳಿ ವಾಪಸ್ ಕಳಿಸುತ್ತಿದ್ದಾರೆ.

ಗ್ರಾಮಕ್ಕೆ 15 ದಿನಗಳ ಲಾಕ್‌ಡೌನ್‌ ಗ್ರಾಮದ ಪ್ರತಿ ಕುಟುಂಬದ ಇಂತಿಷ್ಟು ಜನರನ್ನು ಒಳಗೊಂಡ ಕಾವಲು ಪಡೆಯನ್ನ ರಚಿಸಲಾಗಿದೆ. ಹೀಗೆ ರಚಿಸಿರುವ ಕಾವಲು ಪಡೆಯ ಸದಸ್ಯರು ಪಾಳಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ. ಸುಮಾರು 15 ದಿನಗಳ ಕಾಲ ಗ್ರಾಮಸ್ಥರು ಈ ರೀತಿಯ ಲಾಕ್‌ಡೌನ್‌ಗೆ ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವೇಳೆ 15 ದಿನಗಳ ನಂತರವೂ ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗದಿದ್ದರೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Published On - 1:25 pm, Mon, 6 July 20

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್