ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನೆಯಲ್ಲಿ ಜೋಡೆತ್ತುಗಳ ಮೂಲಕ ಕುಂಟೆ ಹೊಡೆದು ಬಾರುಕೋಲು ಪ್ರದರ್ಶನ ಮಾಡಿ, ಪ್ರತಿಭಟನಾ ನಿರತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪ್ರತಿಭಟನೆಗೂ ಮುನ್ನ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಸಾವನಪ್ಪಿದ ರೈತರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ವಿವಿಧ ರೈತಪರ ಸಂಘಟನೆಗಳು ಹಾಗೂ ಎಡ ಪಂಥೀಯ ಸಂಘಟನೆಗಳು ಸಾಥ್ ನೀಡುತ್ತಿವೆ.
Explainer | ನೂತನ ಕೃಷಿ ಕಾನೂನು 2020 ಹೇಳುವುದೇನು? ವಿವಾದವೇಕೆ? ರೈತರಲ್ಲಿ ಏಕಿಷ್ಟು ಆತಂಕ?