ಹಲ್ಲೆ ಆರೋಪ: ಶಿಕ್ಷಕರ ವಿರುದ್ಧ ತಿರುಗಿಬಿದ್ದ MIT ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಮೈಸೂರು: ವಿದ್ಯಾರ್ಥಿನಿಯರ ಮೇಲೆ ಶಿಕ್ಷಕಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ತಾಂಡವಪುರದ ಬಳಿಯ ಎಂಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಲೇಜಿನ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗು ಶಿಕ್ಷಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ ರಂಜಿತಾ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ತಮ್ಮ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಶಿಕ್ಷಕರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು, ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟನೆ […]
ಮೈಸೂರು: ವಿದ್ಯಾರ್ಥಿನಿಯರ ಮೇಲೆ ಶಿಕ್ಷಕಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ತಾಂಡವಪುರದ ಬಳಿಯ ಎಂಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಲೇಜಿನ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗು ಶಿಕ್ಷಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ ರಂಜಿತಾ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ತಮ್ಮ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಶಿಕ್ಷಕರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು, ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪರ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ನಾಗೇಂದ್ರ ಪ್ರಸಾದ್ ನಿಂತಿದ್ದಾರೆ. ಹಾಗಾಗಿ ನಾಗೇಂದ್ರ ಪ್ರಸಾದ್ಗೆ ರಂಜಿತಾ ಪತಿ ಚೇತನ್ ಕಪಾಳಮೋಕ್ಷ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ.
ರಂಜಿತಾ ಪತಿ ಚೇತನ್ ಕಾಲೇಜಿನ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ. ವಿಭಾಗದ ಮುಖ್ಯಸ್ಥರ ಮೇಲಿನ ಹಲ್ಲೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರೊಟೆಸ್ಟ್ ನಡೆಸುತ್ತಿದ್ದಾರೆ. ಹಲ್ಲೆ ಮಾಡಿರುವ ಬಗ್ಗೆ ಪೊಲೀಸರಿಗೆ ನಾಗೇಂದ್ರ ಪ್ರಸಾದ್ ದೂರು ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.
ಅಲ್ಲದೆ, ಹಲ್ಲೆ ಮಾಡಿದ ದೃಶ್ಯವನ್ನು ಸಿಸಿ ಕ್ಯಾಮರಾದಿಂದ ಕಾಲೇಜು ಆಡಳಿತ ಮಂಡಳಿ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಾಲೇಜಿಗೆ ರಜೆ ಘೋಷಣೆ ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶಿಸಿದೆ.