ಹಲ್ಲೆ ಆರೋಪ: ಶಿಕ್ಷಕರ ವಿರುದ್ಧ ತಿರುಗಿಬಿದ್ದ MIT ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಮೈಸೂರು: ವಿದ್ಯಾರ್ಥಿನಿಯರ ಮೇಲೆ ಶಿಕ್ಷಕಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ತಾಂಡವಪುರದ ಬಳಿಯ ಎಂಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಲೇಜಿನ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗು ಶಿಕ್ಷಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ ರಂಜಿತಾ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ತಮ್ಮ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಶಿಕ್ಷಕರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು, ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟನೆ […]

ಹಲ್ಲೆ ಆರೋಪ: ಶಿಕ್ಷಕರ ವಿರುದ್ಧ ತಿರುಗಿಬಿದ್ದ MIT ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಸಾಧು ಶ್ರೀನಾಥ್​

Updated on: Mar 03, 2020 | 11:50 AM

ಮೈಸೂರು: ವಿದ್ಯಾರ್ಥಿನಿಯರ ಮೇಲೆ ಶಿಕ್ಷಕಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ತಾಂಡವಪುರದ ಬಳಿಯ ಎಂಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಲೇಜಿನ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗು ಶಿಕ್ಷಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ ರಂಜಿತಾ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ:
ತಮ್ಮ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಶಿಕ್ಷಕರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು, ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪರ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ನಾಗೇಂದ್ರ ಪ್ರಸಾದ್ ನಿಂತಿದ್ದಾರೆ. ಹಾಗಾಗಿ ನಾಗೇಂದ್ರ ಪ್ರಸಾದ್​ಗೆ ರಂಜಿತಾ ಪತಿ ಚೇತನ್‌ ಕಪಾಳಮೋಕ್ಷ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ.

ರಂಜಿತಾ ಪತಿ ಚೇತನ್‌ ಕಾಲೇಜಿನ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ. ವಿಭಾಗದ ಮುಖ್ಯಸ್ಥರ ಮೇಲಿನ ಹಲ್ಲೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರೊಟೆಸ್ಟ್​ ನಡೆಸುತ್ತಿದ್ದಾರೆ. ಹಲ್ಲೆ ಮಾಡಿರುವ ಬಗ್ಗೆ ಪೊಲೀಸರಿಗೆ ನಾಗೇಂದ್ರ ಪ್ರಸಾದ್‌ ದೂರು ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಅಲ್ಲದೆ, ಹಲ್ಲೆ ಮಾಡಿದ ದೃಶ್ಯವನ್ನು ಸಿಸಿ ಕ್ಯಾಮರಾದಿಂದ ಕಾಲೇಜು ಆಡಳಿತ ಮಂಡಳಿ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಾಲೇಜಿಗೆ ರಜೆ ಘೋಷಣೆ ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us