ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಅಪಘಾತವಾಗಿ EMT ಸ್ಟಾಪ್ ನರ್ಸ್ಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವಿಜಯಪುರ ಹೊರ ವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.
ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗರ್ಭಿಣಿಗೆ ಯಾವುದೇ ತೊಂದರೆಯಾಗಿಲ್ಲಾ. ಗಂಭೀರವಾಗಿ ಗಾಯಗೊಂಡ ಸ್ಟಾಪ್ ನರ್ಸ್ ತುಳಸಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಡೆದಿದೆ.