ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ.
ಹಿಂಡಿಗನಾಳ ಗ್ರಾಮದ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟ ನಿಧಿಗಳನಾಗಿದ್ದು, ಆತನ ಜೊತೆಯಲ್ಲಿದ್ದ ಶ್ರೀನಿವಾಸ್, ಮಂಜುನಾಥ್ ಮತ್ತು ಸಬಾಸಿನ್ ಎಂಬುವನಿಗೆ ಗಂಭೀರ ಗಾಯಗಳಾಗಿವೆ.
ಘಟನೆ ಸಂಬವಿಸುತ್ತಿದ್ದಂತೆ ರಕ್ಷಣೆಗಾಗಿ ನಿಧಿಗಳ್ಳರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಈ ವಿಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆ ತಿಳಿದು ಉಳಿದವರು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಂದಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.