Elephant Attack | ಹಾಸನ ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೆ ಕಾರ್ಮಿಕ ಬಲಿ..

|

Updated on: Feb 11, 2021 | 12:45 PM

Hassan Elephant Attack | ನಿನ್ನೆ ಸಂಜೆ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ಬಳಿ ಕಾಡಾನೆ ದಾಳಿ ಮಾಡಿತ್ತು. ಈ ವೇಳೆ ಕಾಫಿ ತೋಟದ ಕಾರ್ಮಿಕ ವಸಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಹಾಸನ ವೈದ್ಯಕೀಯ ಬೋಧಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿತ್ತು.

Elephant Attack | ಹಾಸನ ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೆ ಕಾರ್ಮಿಕ ಬಲಿ..
ಪ್ರಾತಿನಿಧಿಕ ಚಿತ್ರ
Follow us on

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇಂದು ಕೂಡ ಮತ್ತೋರ್ವ ವ್ಯಕ್ತಿ ಕಾಡಾನೆ ದಾಳಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಆನೆ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ವಸಂತ್(48) ಚಿಕಿತ್ಸೆ ಫಲಿಸದೆ ಹಾಸನ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ಬಳಿ ಕಾಡಾನೆ ದಾಳಿ ಮಾಡಿತ್ತು.

ಈ ವೇಳೆ ಕಾಫಿ ತೋಟದ ಕಾರ್ಮಿಕ ವಸಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಹಾಸನ ವೈದ್ಯಕೀಯ ಬೋಧಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಗೆ ನಾಲ್ಕನೇ ಬಲಿ ಇದಾಗಿದೆ. ಆನೆ ಹಾವಳಿ ತಡೆಯದ ಸರ್ಕಾರದ ವಿರುದ್ದ ಜನರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ದಿನೇ ದಿನೇ ಆನೆ ದಾಳಿ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರ ಆದಷ್ಟು ಬೇಗ ಈ ಬಗ್ಗೆ ಗಮನ ಹರಿಸಿ ಏನಾದರೂ ಉಪಾಯ ಹುಡುಕಬೇಕಿದೆ ಇಲ್ಲದಿದ್ದರೆ ನಮ್ಮ ಸಹನೆಯ ಕಟ್ಟೆ ಮುರಿದು ನಮ್ಮ ಆಕ್ರೋಶಕ್ಕೆ ಸರ್ಕಾರ ಒಳಗಾಗಬೇಕಾಗುತ್ತೆ ಎಂದು ಸ್ಥಳೀಯರೊಬ್ಬರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಶವಾಗಾರದ ಎದುರು ಜನರ ಅಸಮಾಧಾನ
ಕಾಡಾನೆಗಳು, ಮಾನವನ ಸಂಘರ್ಷ ಮಿತಿಮೀರಿದ ಹಿನ್ನೆಲೆಯಲ್ಲಿ ಸಕಲೇಶಪುರ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಎದುರು ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಕಾರ್ಮಿಕ ವಸಂತನ ಶವ ಪಡೆಯಲು ಬಂದ ಜನ ಶವಾಗಾರದ ಎದುರು ಅಸಮಾಧಾನ ಹೊರ ಹಾಕಿದ್ದಾರೆ. ಜನರು ಮೃತಪಟ್ಟಾಗಲೆಲ್ಲಾ ಪರಿಹಾರ ಕೊಟ್ಟು ಹೋಗ್ತಾರೆ. ಆದ್ರೆ ನಾವು ಸಮಸ್ಯೆಗೆ ಸೂಕ್ತ ಪರಿಹಾರ ಸಿಗುವವರೆಗೂ ನಾವು ವಸಂತ ಮೃತದೇಹವನ್ನು ತೆಗೆದುಕೊಂಡು ಹೋಗಲ್ಲ. ನಿಮ್ಮ ನೇತೃತ್ವದಲ್ಲೇ ಡಿಸಿ ಕಚೇರಿ ಎದುರು ಧರಣಿ ಮಾಡೋಣ ಎಂದು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಇದನ್ನೂ ಓದಿ:
ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

Published On - 10:14 am, Thu, 11 February 21