ಹಾಸನದಲ್ಲಿ ಮತ್ತೊಬ್ಬ ವ್ಯಕ್ತಿಯ ಬರ್ಬರ ಹತ್ಯೆ!
ಹಾಸನ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿದೆ. ಅರಕಲಗೂಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಡಿ ಹೋಗಿದ್ದಾರೆ. ಹಾಸನದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಕೂಡ ಎರೆಬರೆ ಕಾವಲು, ಆರನೇ ಮೈಲಿಕಲ್ಲು ಬಳಿ ಅಪರಿಚಿತ ವ್ಯಕ್ತಿಯ ಶವ ಸಿಕ್ಕಿದೆ. ಮೃತ ವ್ಯಕ್ತಿ ಯಾರೆಂದು ಗುರುತು ಸಿಗದಂತೆ ಹಂತಕರು ಆತನ ಮುಖವನ್ನು ವಿರೂಪಗೊಳಿಸಿದ್ದಾರೆ. ಕೊಲೆಯಾದ ವ್ಯಕ್ತಿಗೆ 45ರಿಂದ 50 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗೊರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಹಾಸನ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿದೆ. ಅರಕಲಗೂಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಡಿ ಹೋಗಿದ್ದಾರೆ.
ಹಾಸನದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಕೂಡ ಎರೆಬರೆ ಕಾವಲು, ಆರನೇ ಮೈಲಿಕಲ್ಲು ಬಳಿ ಅಪರಿಚಿತ ವ್ಯಕ್ತಿಯ ಶವ ಸಿಕ್ಕಿದೆ. ಮೃತ ವ್ಯಕ್ತಿ ಯಾರೆಂದು ಗುರುತು ಸಿಗದಂತೆ ಹಂತಕರು ಆತನ ಮುಖವನ್ನು ವಿರೂಪಗೊಳಿಸಿದ್ದಾರೆ. ಕೊಲೆಯಾದ ವ್ಯಕ್ತಿಗೆ 45ರಿಂದ 50 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗೊರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




