ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರಾಜೀವ್ ಗಾಂಧಿ ಆಸ್ಪತ್ರೆ ಕೊರೊನಾ ಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿತ್ತು. ಆದರೆ ಈಗ ಅಂಥ ಆಸ್ಪತ್ರೆಗೂ ಕೊರೊನಾ ಗ್ರಹಣ ಬಡಿದಿದೆ.
ಇಂದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆಡಳಿತಾಧಿಕಾರಿಗೆ ಹಾಗೂ ಮೂವರು ಡಾಟಾ ಎಂಟ್ರಿ ಆಪರೇಟರ್ಗಳಿಗೆ ಸೋಂಕು ದೃಢವಾಗಿದೆ. ಈ ಹಿಂದೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಪರೀಕ್ಷೆ ನಡೆಸಿದ ವೇಳೆ ಈ ನಾಲ್ವರಿಗೆ ಕೊರೊನಾ ಪಾಸಿಟಿವ್ ಎಂದು ಪತ್ತೆಯಾಗಿದೆ.
ಆದರೆ, ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜ್ ಮಾಹಿತಿ ನೀಡಿದ್ದಾರೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
Published On - 1:47 pm, Fri, 26 June 20