ಅಧಿಕಾರಿಗಳು ಗೃಹ ಸಚಿವರಿಗೆ ಹೀಗೆ ಮಾಹಿತಿಯನ್ನೇ ನೀಡಿಲ್ಲ; ಚಂದ್ರು ಕೊಲೆ ಪ್ರಕರಣದಲ್ಲಿ ಆರಗ ಜ್ಞಾನೇಂದ್ರ ಯುಟರ್ನ್!
ಅಪಘಾತದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದ ಅಧಿಕಾರಿಗಳು, ಘಟನೆ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಮೂವರನ್ನ ಬಂಧಿಸಿರುವುದಾಗಿ ಮಾಹಿತಿ ನೀಡಿದ್ರು. ಆದ್ರೆ ಆರಗ ಜ್ಞಾನೇಂದ್ರ ನೀಡಿರುವ ಮಾಹಿತಿ ಬಗ್ಗೆ ಪೊಲೀಸರಿಗೆ ಗೋತ್ತಿಲ್ಲ ಎಂಬುದು ತಿಳಿದುಬಂದಿದೆ.
ಬೆಂಗಳೂರು: ಇಲ್ಲಿನ ಜೆ.ಜೆ. ನಗರ ಎಂಬಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಯುಟರ್ನ್ ಹೊಡೆದಿದ್ದಾರೆ. ಮೊದಲು ‘ಉರ್ದು ಮಾತನಾಡದಿದ್ದಕ್ಕೆ ಹತ್ಯೆ’ ಎಂದಿದ್ದರು. ಈಗ ಬೈಕ್ ಟಚ್ ಆಗಿ ಗಲಾಟೆ ವೇಳೆ ಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ‘ದಲಿತ ಚಂದ್ರುನನ್ನು ಚೂರಿಯಿಂದ ಚುಚ್ಚಿ ಚುಚ್ಚಿ ಕೊಂದಿದ್ದಾರೆ, ಉರ್ದು ಮಾತನಾಡಲು ಬರಲ್ಲವೆಂದು ಯುವಕ ಹೇಳಿದ್ದ. ಉರ್ದು ಮಾತನಾಡದಿದ್ದಕ್ಕೆ ಚುಚ್ಚಿ ಚುಚ್ಚಿ ಕೊಂದಿದ್ದಾರೆ’ ಎಂದು ಈ ಮೊದಲು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ.
ಗೃಹ ಸಚಿವರಿಗೆ ಬೆಳಿಗ್ಗೆ ಪೊಲೀಸರು ಚಂದ್ರು ಕೊಲೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಬಂಧನ ಬಗ್ಗೆಯು ಮಾಹಿತಿ ನೀಡಿದ್ದಾರೆ. ಆದರೆ, ಗೃಹ ಸಚಿವರಿಗೆ ಅಧಿಕಾರಿಗಳು ಈ ರೀತಿಯ ಮಾಹಿಯನ್ನೇ ನೀಡಿಲ್ಲ ಎಂದು ತಿಳಿದುಬಂದಿದೆ. ಗೃಹ ಸಚಿವರ ಇವತ್ತಿನ ಹೇಳಿಕೆಯಿಂದ ಅಧಿಕಾರಿಗಳಲ್ಲೆ ಗೊಂದಲ ಉಂಟಾಗಿದೆ. ಪೊಲೀಸರ ಅಧಿಕಾರಿಗಳಲ್ಲಿಯೇ ಗೊಂದಲ ಸೃಷ್ಟಿಯಾಗಿದೆ. ಅಪಘಾತದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದ ಅಧಿಕಾರಿಗಳು, ಘಟನೆ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಮೂವರನ್ನ ಬಂಧಿಸಿರುವುದಾಗಿ ಮಾಹಿತಿ ನೀಡಿದ್ರು. ಆದ್ರೆ ಆರಗ ಜ್ಞಾನೇಂದ್ರ ನೀಡಿರುವ ಮಾಹಿತಿ ಬಗ್ಗೆ ಪೊಲೀಸರಿಗೆ ಗೋತ್ತಿಲ್ಲ ಎಂಬುದು ತಿಳಿದುಬಂದಿದೆ.
ನಗರದ ಜೆ.ಜೆ. ನಗರ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (5-04-22) ಕೊಲೆಯೊಂದು ನಡೆದಿತ್ತು. ಮಧ್ಯರಾತ್ರಿ ದಲಿತ ಯುವಕ ಚಂದ್ರು (22) ಹತ್ಯೆಯಾಗಿತ್ತು. ಈ ಪ್ರಕರಣ ಈಗ ಮತೀಯ ತಿರುವು ಪಡೆದುಕೊಂಡಿದೆ. ಉರ್ದು ಮಾತನಾಡಲು ನಿರಾಕರಿಸಿದ್ದಕ್ಕೆ ಚಂದ್ರು ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಚಂದ್ರು ಎಂಬಾತನನ್ನು ಹತ್ಯೆ ಮಾಡಿದ್ದಾರೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡಲ್ಲ ಎಂದಿದ್ದಕ್ಕೆ ಹತ್ಯೆ ಮಾಡಲಾಗಿದೆ. ಚೂರಿಯಿಂದ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚಂದ್ರು ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಬಂಧನ ಮಾಡಲಾಗಿದ್ದು ಚಂದ್ರು ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಸ್ವತಃ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಯಿಂದ ಆರಗ ಯುಟರ್ನ್ ಹೊಡೆದಿದ್ದಾರೆ.
ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವ: ಸಿದ್ದರಾಮಯ್ಯ ಕಿಡಿ
ಬೆಂಗಳೂರಿನಲ್ಲಿ ಯುವಕ ಚಂದ್ರು ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಿದ್ದಾಗಿ ಆರಗ ಜ್ಞಾನೇಂದ್ರ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವರು. ಹರ್ಷ ಕೊಲೆ ಪ್ರಕರಣದಲ್ಲೂ ಇದೇ ರೀತಿ ಹೇಳಿಕೆ ನೀಡಿದ್ದರು. ಹರ್ಷ ವಿರುದ್ಧ ಕ್ರಿಮಿನಲ್ ಕೇಸ್ ಇದೆ ಎಂದಿದ್ದರು. ನಂತರ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ. ಆರಗ ಜ್ಞಾನೇಂದ್ರಗೆ ಇಲಾಖೆ ನಿಭಾಯಿಸಲು ಬರ್ತಿಲ್ಲ. ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಹಾಗೇ ಹೇಳಿಕೆ ನೀಡಿದ್ದರು. ಆಗ ಗೃಹ ಸಚಿವರು ಏನು ಹೇಳಿದ್ದರೆಂದು ಗೊತ್ತಿದೆ. ಇಂತಹವರು ಗೃಹ ಸಚಿವರಾಗಿದ್ದು ನಮ್ಮ ದೌರ್ಭಾಗ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಶಾಂತಿ ಹಾಳು ಮಾಡುವ ಹೇಳಿಕೆ ಆರಗರದ್ದು: ಹೆಚ್ಡಿ ಕುಮಾರಸ್ವಾಮಿ
ಶಾಂತಿ ಹಾಳು ಮಾಡುವ ಹೇಳಿಕೆ ಆರಗರದ್ದು. ಗೃಹ ಸಚಿವರೆಂಬ ಅರಿವು ಆರಗಗೆ ಇಲ್ಲ. ಈ ಕೇಸ್ನನ್ನು ಎನ್ಐಎಗೆ ಕೊಡ್ತೀರಾ? ನೀವು ಒಂದು ಹೇಳಿಕೆ, ಪೊಲೀಸರು ಒಂದು ಹೇಳಿಕೆ ಕೊಡ್ತಾರೆ. ಸಮಾಜದಲ್ಲಿ ವಿಶ್ವಾಸವನ್ನ ಹಾಳುಮಾಡುವ ಹೇಳಿಕೆ ಕೊಟ್ಟಿದ್ದಾರೆ. 24 ಗಂಟೆ ನಂತರ ಪೊಲೀಸರು ಒಂದು, ಗೃಹ ಸಚಿವರು ಒಂದು ಹೇಳಿಕೆ ಕೊಡ್ತಾರೆ. ಯಾವ ಕಾರಣಕ್ಕೆ ಕೊಲೆ ಆಗಿದ್ದರೂ ಕಠಿಣ ಶಿಕ್ಷಯಾಗಬೇಕು. ಸಣ್ಣತನದಿಂದ ಗೃಹ ಸಚಿವರ ಸ್ಟೇಟ್ಮೆಂಟ್ ಇದೆ. ಆರಗರ ಪದ ಬಳಕೆ, ಜವಬ್ದಾರಿಯ ಅರಿವು ಇಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ.ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ.ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ…2/2
— Kamal Pant, IPS. ಪೊಲೀಸ್ ಆಯುಕ್ತರು, ಬೆಂಗಳೂರು ನಗರ. (@CPBlr) April 6, 2022
ಘಟನೆ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ
ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಬೆಂಗಳೂರು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉರ್ದು ಮಾತಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ: ಮತೀಯ ತಿರುವು ಪಡೆದುಕೊಂಡ ಚಂದ್ರು ಹತ್ಯೆ ಪ್ರಕರಣ
ಇದನ್ನೂ ಓದಿ: ಆಜಾನ್ಗೆ ಮಾತ್ರ ಶಬ್ದ ಮಿತಿ ಇಲ್ಲ, ಬಸ್ಗೂ ಶಬ್ದ ಮಿತಿಯ ಆದೇಶವಿದೆ; ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ
Published On - 12:04 pm, Wed, 6 April 22