ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ: ಇಬ್ಬರ ಕೊಲೆಯಲ್ಲಿ ಜಗಳ ಅಂತ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 22, 2022 | 10:11 PM

ಶಿಲ್ಪಾ ಮತ್ತು ಶ್ರೀಧರ್ ಗುಪ್ತಾ ಕುಟುಂಬದ ನಡುವೆ ಜಮೀನು ವಿವಾದ ಇತ್ತು. ಇಂದು ಸಂಜೆ ಇಬ್ಬರ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿ ಕುಡುಗೋಲಿನಿಂದ ಶ್ರೀಧರ್ ಗುಪ್ತಾ ಹತ್ಯೆ ಮಾಡಿದ್ದಾನೆ.

ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ: ಇಬ್ಬರ ಕೊಲೆಯಲ್ಲಿ ಜಗಳ ಅಂತ್ಯ
ಸಾಂದರ್ಭಿಕ ಚಿತ್ರ
Image Credit source: India.com
Follow us on

ತುಮಕೂರು: ಜಮೀನು ವಿವಾದ ಹಿನ್ನೆಲೆ ಇಬ್ಬರ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಸಂತೇ ಬೀದಿ ನಡೆದಿದೆ. ಮಲ್ಲಿಕಾರ್ಜುನಯ್ಯ (45) ಶಿಲ್ಪಾ (35) ಮೃತರು. ಶ್ರೀದರ್ ಗುಪ್ತ ಎಂಬಾತನಿಂದ ಕೊಲೆ ಮಾಡಲಾಗಿದೆ. ಗ್ರಾಮದಲ್ಲಿ ನಿವೇಶನಕ್ಕಾಗಿ ಗಲಾಟೆ ನಡೆದಿದ್ದು, ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಶಿಲ್ಪಾ ಮತ್ತು ಶ್ರೀಧರ್ ಗುಪ್ತಾ ಕುಟುಂಬದ ನಡುವೆ ಜಮೀನು ವಿವಾದ ಇತ್ತು. ಇಂದು ಸಂಜೆ ಇಬ್ಬರ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿ ಕುಡುಗೋಲಿನಿಂದ ಶ್ರೀಧರ್ ಗುಪ್ತಾ ಹತ್ಯೆ ಮಾಡಿದ್ದಾನೆ. ಜಗಳ ಬಿಡಿಸಲು ಬಂದ ರಾಮಾಂಜನಪ್ಪ ಮೇಲೂ ಕುಡುಗೋಲಿನಿಂದ ದಾಳಿ ಮಾಡಲಾಗಿದೆ. ಶಿಲ್ಪಾ, ಮಲ್ಲಿಕಾರ್ಜುನಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಿಡಿಗೇಶಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ದಂಪತಿ ಆತ್ಮಹತ್ಯೆಗೆ ಶರಣು

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಸಂಬ್ರವಳ್ಳಿ ಗ್ರಾಮದ ತೋಟದಲ್ಲಿದ್ದ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೆಟ್ಟಪ್ಪ(50), ರುಕ್ಮಿಣಿ(43) ಆತ್ಮಹತ್ಯೆ ಮಾಡಿಕೊಂಡವರು. ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಜಮೀರ್ ಸಾಹೇಜ್ ತೋಟದಲ್ಲಿ‌ ಕಳೆದ 20 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಕೆಲಸ ಮಾಡುತ್ತಿದ್ದ ತೋಟದ ಮನೆಯಲ್ಲೇ ವಾಸವಿದ್ದರು. ಇತ್ತೀಚಿಗೆ ಮಕ್ಕಳ ಮದುವೆ ಹಾಗೂ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಒನಕೆಯಿಂದ ತಲೆಗೆ ಹೊಡೆದು ವ್ಯಕ್ತಿ ಕೊಲೆ

ಒನಕೆಯಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ರಾಯಚೂರು ತಾಲ್ಲೂಕಿನ ಗಿಲ್ಲೆಸುಗೂರು ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ನರಸಿಂಹಲು (35)ಮೃತ ವ್ಯಕ್ತಿ. ನಿನ್ನೆ ಸಂಜೆ ಪತ್ನಿ ಮಲ್ಲಮ್ಮ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಬಳಿಕ ಇಡಪನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನೈತಿಕ ಸಂಬಂಧ ಹಿನ್ನೆಲೆ ಕೊಲೆಯಾಗಿರೊ ಶಂಕೆ ವ್ಯಕ್ತವಾಗಿದೆ. ಪೊಲೀಸರು ಹಲವರನ್ನ ವಿಚಾರಣೆಗೊಳಪಡಿಸಿದ್ದಾರೆ. ಮೃತ ನರಸಿಂಹಲು ಪತ್ನಿ ಮಲ್ಲಮ್ಮ ಇಬ್ಬರು ಮಕ್ಕಳೊಂದಿಗೆ ಹೊರಗೆ ಹೋಗಿದ್ದರು. ಆಕೆ ಮರಳಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ದಾಖಲೆ ಸೃಷ್ಟಿಸಿ 8 ಎಕರೆ ಜಮೀನು ಲಪಟಾಯಿಸಲು ಯತ್ನಿಸಿದ್ದ 10 ಆರೋಪಿಗಳು ಅರೆಸ್ಟ್​

ಕೋಲಾರ: ನಕಲಿ ದಾಖಲೆ ಸೃಷ್ಟಿಸಿ 8 ಎಕರೆ 38 ಗುಂಟೆ ಜಮೀನನ್ನು ಲಪಟಾಯಿಸಲು ಹೊರಟಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೋಲಾರ ಜಿಲ್ಲಾ ವರಿಷ್ಠಾಧಿಕಾರಿ ಡಿ. ದೇವರಾಜ್ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಳಬಾಗಿಲು ತಾಲೂಕಿನ ದಾರೇನಹಳ್ಳಿ ಗ್ರಾಮದ ಸರ್ವೆ ನಂ. ೩೬/೧ ರಲ್ಲಿ ೧ ಎಕರೆ ೨೮ ಗುಂಟೆ, ೩೬/೨ ರಲ್ಲಿ ೬ ಎಕರೆ ೧ಗುಂಟೆ, ೩೩/೨ ರಲ್ಲಿ ೧ ಎಕರೆ ೯ ಗುಂಟೆ ಸೇರಿದಂತೆ ಒಟ್ಟು ೮ ಎಕರೆ ೩೮ ಗುಂಟೆ ಜಮೀನು ದೆಹಲಿ ಮೂಲದವರಾದ ಧರ್ಮನಾಥ ಕುನ್ವರ್ ಹೆಸರಲ್ಲಿದೆ. ಅವರು ಮೃತಪಟ್ಟಿದ್ದು ಅವರ ಮಗ ಮುಕೇಶ್ ಕುನ್ವರ್ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮುಳಬಾಗಿಲು ತಹಶೀಲ್ದಾರ್ ಕಚೇರಿಯಲ್ಲಿ ಖಾತೆ ಮಾಡಿಸಿ ಕೊಳ್ಳಲು ಮುಕೇಶ್ ಸಬರ್ ವಾಲ್ ಎಂಬ ಆರೋಪಿ ಮತ್ತು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಕೃಷ್ಣಾರೆಡ್ಡಿ ಸೇರಿ ಇತರರು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:06 pm, Thu, 22 September 22