ಸೋದರಿ ಮಗನ ಹಠಾತ್‌ ನಿಧನಕ್ಕೆ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ಹೀಗಿದೆ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದಿಂದ ಸರ್ಜಾ ಕುಟುಂಬಸ್ಥರು ಅತೀವ ದುಃಖದಲ್ಲಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದಾಗಿ ನಟ ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಲ್ಲಿ ಸಿಲುಕಿದ್ದಾರೆ. ಸಹೋದರಿಯ ಮಗ ಚಿರಂಜೀವಿ ಸರ್ಜಾ ಹಠಾತ್‌ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಅರ್ಜುನ್ ಸರ್ಜಾ ಫ್ಯಾಮಿಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ, ನಾಳೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಸಾವಿನ ಮಾಹಿತಿ ತಿಳಿದ ತಕ್ಷಣ ಅರ್ಜುನ್ […]

ಸೋದರಿ ಮಗನ ಹಠಾತ್‌ ನಿಧನಕ್ಕೆ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ಹೀಗಿದೆ
ಸಾಧು ಶ್ರೀನಾಥ್​

Updated on: Jun 16, 2020 | 11:30 AM

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದಿಂದ ಸರ್ಜಾ ಕುಟುಂಬಸ್ಥರು ಅತೀವ ದುಃಖದಲ್ಲಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದಾಗಿ ನಟ ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಲ್ಲಿ ಸಿಲುಕಿದ್ದಾರೆ. ಸಹೋದರಿಯ ಮಗ ಚಿರಂಜೀವಿ ಸರ್ಜಾ ಹಠಾತ್‌ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಅರ್ಜುನ್ ಸರ್ಜಾ ಫ್ಯಾಮಿಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ, ನಾಳೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಸಾವಿನ ಮಾಹಿತಿ ತಿಳಿದ ತಕ್ಷಣ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಸಾಂಕೇತಿಕವಾಗಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

Published On - 7:16 pm, Sun, 7 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us