AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?

Arjun Tendulkar: ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 5:59 PM

Share

ಈ ಬಾರಿಯ ಐಪಿಎಲ್​ನಲ್ಲಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ವಿಶೇಷ ಎಂದರೆ, ಈ ಆಟಗಾರರ ಪೈಕಿ ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಕೂಡ ಇದ್ದಾರೆ. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಸದ್ಯದ್ದು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು. ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿದೆ.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ. ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ