ಈ ಬಾರಿಯ ಐಪಿಎಲ್ನಲ್ಲಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ವಿಶೇಷ ಎಂದರೆ, ಈ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಕೂಡ ಇದ್ದಾರೆ. ಹರಾಜಿನಲ್ಲಿ ಅರ್ಜುನ್ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಸದ್ಯದ್ದು.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್ ಕಾಲಿಟ್ಟಿದ್ದರು. ಬೌಲರ್ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್ ನೀಡಿ ಒಂದು ವಿಕೆಟ್ ಪಡೆದರೆ, ಪುದುಚೇರಿ ವಿರುದ್ಧ 33 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು. ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿದೆ.
ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್ ತೆಂಡೂಲ್ಕರ್ ಮುಂಬೈನವರು. ಮುಂಬೈ ಇಂಡಿಯನ್ಸ್ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.
ಇದೇ ತಿಂಗಳು ನಡೆಯಲಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ. ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.
Decision Review System ವಿರುದ್ಧ ಕ್ರಿಕೆಟ್ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್