ಬೆಂಗಳೂರಿನಲ್ಲಿ ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಂದು ಇಹಲೋಕ ತ್ಯಜಿಸಿದ್ದಾರೆ. ಮಧ್ಯಾಹ್ನದ ಬಳಿಕ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ವಿಧಿವಿಧಾನ ಬೆಂಗಳೂರಿನಲ್ಲಿಯೇ ನೆರವೇರಿಸಲಾಗುತ್ತೆ. ಮಧ್ಯಾಹ್ನ 1.30ರ ಸುಮಾರಿಗೆ ಪಾರ್ಥಿವ‌ ಶರೀರವನ್ನ ಬೆಂಗಳೂರಿಗೆ ಹೆಲಿಕಾಪ್ಟರ್ ಮುಖಾಂತರ ತರಲಾಗುತ್ತೆ. ವಿದ್ಯಾಪೀಠ ಬಳಿ ಶಿಷ್ಯವೃಂದಕ್ಕೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3ಗಂಟೆಯಿಂದ ಸಂಜೆ 5.30ರವರೆಗೆ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತೆ. ಈಗಾಗಲೇ ಅಂತಿಮ ದರ್ಶನಕ್ಕೆ ನ್ಯಾಷನಲ್ […]

ಬೆಂಗಳೂರಿನಲ್ಲಿ ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ
Follow us
ಸಾಧು ಶ್ರೀನಾಥ್​
|

Updated on:Dec 29, 2019 | 10:45 AM

ಬೆಂಗಳೂರು: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಂದು ಇಹಲೋಕ ತ್ಯಜಿಸಿದ್ದಾರೆ. ಮಧ್ಯಾಹ್ನದ ಬಳಿಕ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶ್ರೀಗಳ ಅಂತಿಮ ವಿಧಿವಿಧಾನ ಬೆಂಗಳೂರಿನಲ್ಲಿಯೇ ನೆರವೇರಿಸಲಾಗುತ್ತೆ. ಮಧ್ಯಾಹ್ನ 1.30ರ ಸುಮಾರಿಗೆ ಪಾರ್ಥಿವ‌ ಶರೀರವನ್ನ ಬೆಂಗಳೂರಿಗೆ ಹೆಲಿಕಾಪ್ಟರ್ ಮುಖಾಂತರ ತರಲಾಗುತ್ತೆ. ವಿದ್ಯಾಪೀಠ ಬಳಿ ಶಿಷ್ಯವೃಂದಕ್ಕೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3ಗಂಟೆಯಿಂದ ಸಂಜೆ 5.30ರವರೆಗೆ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತೆ. ಈಗಾಗಲೇ ಅಂತಿಮ ದರ್ಶನಕ್ಕೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಿದ್ಧತೆ ಮಾಡಲಾಗಿದೆ.

ಪಿಎಂಕೆ ರೋಡ್‌ ಮುಖ್ಯದ್ವಾರದಲ್ಲಿ ಸಾರ್ವಜನಿಕರಿಗೆ ಪ್ರವೇಶ ಅವಕಾಶ ನೀಡಲಾಗಿದ್ದು, ದರ್ಶನ ಪಡೆದ ಬಳಿಕ ಅದೇ ದ್ವಾರದ ಮೂಲಕ ಸಾರ್ವಜನಿಕರು ವಾಪಸ್‌ ತೆರಳಲು ವ್ಯವಸ್ಥೆ ಮಾಡಲಾಗಿದೆ. ವಿಐಪಿಗಳಿಗೆ ಗೇಟ್‌ ನಂಬರ್ 1ರ ಮೂಲಕ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ದರ್ಶನ ಪಡದು ಕೆಲಕಾಲ ಕುಳಿತುಕೊಳ್ಳುವ ಗಣ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸಪೆಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 10:39 am, Sun, 29 December 19