ಮರಕ್ಕೆ ಜೀಪ್ ಡಿಕ್ಕಿ: ಗಸ್ತಿನಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು ವಾಹನದಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಎಎಸ್‌ಐ ಮೂರ್ತಿ, ಹೆಚ್‌ಸಿ ಶಾಂತಕುಮಾರ್ ಮೃತರು. ತಡರಾತ್ರಿ 1.30 ಸುಮಾರಿಗೆ ಗಸ್ತಿನಲ್ಲಿದ್ದ ಜೀಪ್ ಆಯ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಜೀಪ್ ಡಿಕ್ಕಿ: ಗಸ್ತಿನಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು

Updated on: Nov 12, 2020 | 7:36 AM

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು ವಾಹನದಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಎಎಸ್‌ಐ ಮೂರ್ತಿ, ಹೆಚ್‌ಸಿ ಶಾಂತಕುಮಾರ್ ಮೃತರು.

ತಡರಾತ್ರಿ 1.30 ಸುಮಾರಿಗೆ ಗಸ್ತಿನಲ್ಲಿದ್ದ ಜೀಪ್ ಆಯ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.