ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಸಾಧ್ಯತೆ, ಸಿದ್ದರಾಮಯ್ಯ ಮತ್ತೆ CM ಆಗಬೇಕು- ಜಮೀರ್
ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನಾಭಿಪ್ರಾಯ.. ಹಾಗೆಯೇ ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ನಾನು ಜನರ ಅಭಿಪ್ರಾಯವನ್ನ ಹೇಳಿದ್ದೇನೆ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಉತ್ತರಿಸುತ್ತೇನೆ. ಬೈಎಲೆಕ್ಷನ್ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು, ಚುನಾವಣೆ ಬರಬಹುದು. ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಚುನಾವಣೆ […]
ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನಾಭಿಪ್ರಾಯ.. ಹಾಗೆಯೇ ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.
ನಾನು ಜನರ ಅಭಿಪ್ರಾಯವನ್ನ ಹೇಳಿದ್ದೇನೆ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಉತ್ತರಿಸುತ್ತೇನೆ. ಬೈಎಲೆಕ್ಷನ್ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು, ಚುನಾವಣೆ ಬರಬಹುದು.
ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಜಮೀರ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ಹಿಂದೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಇಂತಹ ಹೇಳಿಕೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೂ ಶಿಸ್ತು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು.
ಇದನ್ನೂ ಓದಿ: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್ ಸಂಸ್ಕೃತಿ ಅಲ್ಲ -ಜಮೀರ್, ಸೌಮ್ಯಾಗೆ ಕೋಳಿವಾಡ ಟಾಂಗ್
Published On - 12:02 pm, Thu, 29 October 20