
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 6,670 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ಈಗ ರಾಜ್ಯದಲ್ಲಿ1,64,924ಕ್ಕೇ ಏರಿಕೆಯಾಗಿದೆ.
ಬೆಂಗಳೂರಲ್ಲಿ ಇವತ್ತು 2147 ಜನರಿಗೆ ಕೊರೊನಾ ಸೋಂಕು ತಗುಲಿದ್ರೆ, ಬಳ್ಳಾರಿಯಲ್ಲಿ 684 ಮತ್ತು ಬೆಳಗಾವಿಯಲ್ಲಿ 390 ಮಂದಿಗೆ ಸೋಂಕು ವಕ್ಕರಿಸಿದೆ. ಹಾಗೇನೆ ಕಲಬುರಗಿಯಲ್ಲಿ 271, ಧಾರವಾಡದಲ್ಲಿ 266, ಮೈಸೂರು 242 ಮತ್ತು ಉಡುಪಿಯಲ್ಲಿ 246 ಹೊಸ ಪ್ರಕರಣಗಳು ದಾಖಲಾಗಿವೆ.
ಕನಿಷ್ಠ 101 ಜನರು ಕೊರೊನಾದಿಂದಾಗಿ ರಾಜ್ಯದಲ್ಲಿ ಇವತ್ತು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ ರಾಜ್ಯದಲ್ಲಿ 2,998ರಷ್ಟಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 22 ಜನರು ಬಲಿಯಾದ್ರೆ,ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 15 ಜನರು ಸಾವನ್ನಪ್ಪಿದ್ದಾರೆ. ಧಾರವಾಡ, ಹಾಸನ ಜಿಲ್ಲೆಯಲ್ಲಿ ಕೂಡಾ ಕೊರೊನಾಗೆ ತಲಾ 9 ಜನರು ಸಾವನ್ನಪ್ಪಿದ್ದಾರೆ.
ಇನ್ನು ಕೊರೊನಾ ಸೋಂಕಿತರ ಪೈಕಿ 84,232 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 77,686 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.