
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರುದ್ರನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ ಬೆಂಗಳೂರಿನ 41ಜನರು ಸೇರಿ ಒಟ್ಟು 128 ಜನರು ಸಾವನ್ನಪ್ಪಿದ್ದಾರೆ.
ಹೊಸದಾಗಿ ಇಂದು ಕರ್ನಾಟಕದಲ್ಲಿ 9,540 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಇದರಲ್ಲಿ ಬೆಂಗಳೂರಿನ ಸಂಖ್ಯೆಯೇ 3,419 ರಷ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 4,21,730ಕ್ಕೇರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 6,808 ಜನರ ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 2,307ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.