ATM ಒಡೆದು 27 ಲಕ್ಷ ರೂ. ದೋಚಿದ ಕಳ್ಳರು, ಎಲ್ಲಿ?
ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂ ಹೊಡೆದು 27 ಲಕ್ಷ ರೂ ಹಣ ದೋಚಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂನನ್ನು ತಡರಾತ್ರಿ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಒಡೆದಿದ್ದಾರೆ. ಬಳಿಕ, ಎಟಿಎಂ ಒಳಗಿದ್ದ ರೂ 27 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕೃತ್ಯದ ಸುಳಿವು ಸಿಗಬಾರದೆಂದು ಕಳ್ಳರು ಸಿಸಿಟಿವಿಯನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಮನೆಯ ಮಾಲೀಕರು ಗಮನಿಸಿದಾಗ ಎಟಿಎಂ ಕಳ್ಳತನವಾಗಿರುವ ವಿಚಾರ ಬೆಳಕಿಗೆ ಬಂದಿದೆ. […]

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂ ಹೊಡೆದು 27 ಲಕ್ಷ ರೂ ಹಣ ದೋಚಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂನನ್ನು ತಡರಾತ್ರಿ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಒಡೆದಿದ್ದಾರೆ. ಬಳಿಕ, ಎಟಿಎಂ ಒಳಗಿದ್ದ ರೂ 27 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕೃತ್ಯದ ಸುಳಿವು ಸಿಗಬಾರದೆಂದು ಕಳ್ಳರು ಸಿಸಿಟಿವಿಯನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಮನೆಯ ಮಾಲೀಕರು ಗಮನಿಸಿದಾಗ ಎಟಿಎಂ ಕಳ್ಳತನವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




